ಸುಂಟಿಕೊಪ್ಪ, ಜ. ೨೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೇಂದ್ರ ಸರ್ಕಾರದಿಂದ ಕೊಡಲಾಗಿರುವ ಡಿಜಿಟಲ್ ಸೇವಾ ಕೇಂದ್ರಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಕೊಡುವುದರೊಂದಿಗೆ ಸೇವಾ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸ್ವಸಹಾಯ ಸಂಘದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್ ಕರೆ ನೀಡಿದರು.

ಸುಂಟಿಕೊಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಂiÀi ಕಚೇರಿಯಲ್ಲಿ ನೂತನವಾಗಿ ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ನೂತನ ಕಾರ್ಯಕ್ರಮದ ವಿವರಗಳನ್ನು ನೀಡಿದರು.

ಮುಖ್ಯವಾಗಿ ಆಧಾರ್ ಕಾರ್ಡ್ನಲ್ಲಿರುವ ಲೋಪಗಳನ್ನು ತಿದ್ದುಪಡಿಸಿಕೊಳ್ಳಲು ಸಂಘದ ಸದಸ್ಯರು ಫಲಾನುಭವಿಗಳ ಗಮನ ಸಳೆಯಬೇಕು ಜೊತೆಗೆ ಶೀಘ್ರವಾಗಿ ಸ್ಪಂದಿಸಿ ಸರ್ಕಾರಿ ದರದಲ್ಲಿಯೇ ಸೇವೆಗಳನ್ನು ಒದಗಿಸಲಾಗು ವುದೆಂದೂ ರೋಹಿತ್ ತಿಳಿಸಿದರು.

ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನೆಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ನೆರವೇರಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಒಕ್ಕೂಟದ ಅಧ್ಯಕ್ಷರುಗಳಾದ ನಾಗರತ್ನ ಸುರೇಶ್, ರಮಣಿ, ಮೇಲ್ವಿಚಾರಕಿ ಪುಷ್ಪಲತಾ ಲೋಕೇಶ್, ಸೇವಾ ಪ್ರತಿನಿಧಿಗಳಾದ ಯಶೋಧ, ಜ್ಯೋತಿ ಲಕ್ಷಿö್ಮÃ, ಕುಸುಮ ಸೋಮಯ್ಯ, ಚಿತ್ರಾ ಸುರೇಶ್, ನಂದಿನಿ, ಮಾಲಿನಿ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಇದ್ದರು.