ಮಡಿಕೇರಿ, ಜ. ೨೨: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಸೃಜಿಸಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ನಗರಸಭೆಯಲ್ಲಿ ಡೇ-ನಲ್ಮ್ ಯೋಜನೆಯಡಿ ರಚಿಸಿದ ಪ್ರದೇಶ ಮಟ್ಟದ ಒಕ್ಕೂಟ-ಸ್ವಸಹಾಯ ಸಂಘಗಳ ಸದಸ್ಯರಿಂದ ೩ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಗೌರವಧನ ರೂ. ೮ ಸಾವಿರ ಹಾಗೂ ಪ್ರಯಾಣ ಭತ್ಯೆ ಗರಿಷ್ಠ ರೂ. ೨ ಸಾವಿರಗಳನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ನಗರಸಭೆ ಡೇ-ನಲ್ಮ್ ವಿಭಾಗದಲ್ಲಿ ಸಂಪರ್ಕಿಸಿ ದೃಢೀಕೃತ ದಾಖಲೆಗಳೊಂದಿಗೆ ತಾ. ೨೦ ರೊಳಗೆ ಅರ್ಜಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ವಯೋಮಿತಿ ೧೮ ರಿಂದ ೪೫ ವರ್ಷ. ಕನಿಷ್ಟ ಪಿ.ಯು.ಸಿ ತೇರ್ಗಡೆಯಾಗಿರಬೇಕು. ಮಡಿಕೇರಿ ನಗರಸಭೆಯ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ರಚಿಸಿದ ಪ್ರದೇಶಮಟ್ಟದ ಒಕ್ಕೂಟದ-ಸ್ವಸಹಾಯ ಸಂಘಗಳಲ್ಲಿ ಕನಿಷ್ಟ ಮೂರು ವರ್ಷದಿಂದ ಸದಸ್ಯರಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.(ಪ್ರಮಾಣ ಪತ್ರ ಲಗತ್ತಿಸುವುದು). ಸ್ವಸಹಾಯ ಸಂಘವು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯತ್ವವನ್ನು ಹೊಂದಿರಬೇಕು. ಸ್ವಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿಸಿರಬೇಕು. ಸುಸ್ತಿದಾರರಾಗಿರಬಾರದು. ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸ್ಥಳೀಯ ನಿವಾಸಿಯಾಗಿರಬೇಕು.

ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಸ್ವಇಚ್ಚಾ ಸೇವಾ ಮನೋಭಾವ ಹೊಂದಿರಬೇಕು. ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಬೇರೆ ಬೇರೆ ಸ್ಥಳಗಳಲ್ಲಿ ಜಿಲ್ಲೆಗಳಲ್ಲಿ ಹೊರ ರಾಜ್ಯಗಳಲ್ಲಿ ನೀಡುವ ತರಬೇತಿಗೆ ಅಥವಾ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ಧರಿರಬೇಕು. ಅಭ್ಯರ್ಥಿಯು ಸ್ವ ಸಹಾಯ ಸಂಘದಿAದ ಸಾಲ ಪಡೆದು ಆಸ್ತಿ ಸೃಜಿಸುವಿಕೆ, ಮಕ್ಕಳ ವಿದ್ಯಾಭ್ಯಾಸ ಮತ್ತು ಮುಂತಾದ ಚಟುವಟಿಕೆಗಳನ್ನು ಕೈಗೊಂಡಿರಬೇಕು. ಪಂಚಸೂತ್ರದ ಬಗ್ಗೆ ತಿಳುವಳಿಕೆಯನ್ನು ಹೊಂದಿದ್ದು, ಸ್ವ ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಯಾವುದೇ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು ಎಂದು ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ.