ವೀರಾಜಪೇಟೆ, ಜ. ೨೨: ನಗರ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಾದಂಡ ಪಿ. ತಿಮಯ್ಯ ಆಯ್ಕೆಗೊಂಡರು.
ವೀರಾಜಪೇಟೆ ನಗರ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ನಗರದ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತು ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರು ನಗರದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಆದೇಶ ಪತ್ರವನ್ನು ಮಾದಂಡ ತಿಮ್ಮಯ್ಯ ಅವರಿಗೆ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಸಮ್ಮುಖದಲ್ಲಿ ಹಸ್ತಾಂತರ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಪಕ್ಷದ ಸಂಘಟನೆಗೆ ನೂತನ ಅಧ್ಯಕ್ಷರು ಶ್ರಮವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜೇಶ್ ಪದ್ಮನಾಭ, ಮೊಹಮ್ಮದ್ ರಾಫಿ, ಅಗಸ್ಟೀನ್ ಬೆನ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚೆಂಗಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮ್ಮರ್ ಫಾರೂಖ್ ಮತ್ತು ವಿವಿಧ ಘಟಕದ ಪದಾಧಿಕಾರಿಗಳು ಮುಖಂಡರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.