ಸರೋಜಾ ಶೇಖರ್

ಶನಿವಾರಸಂತೆ, ಜ. ೨೨: ಇಂದು ಮಹಿಳೆಯ ಬದುಕು ಸಮಸ್ಯೆಗಳ ಆಗರವಾಗುತ್ತಿದ್ದು, ಶಿಕ್ಷತೆ, ಅಶಿಕ್ಷತೆ ಎನ್ನದೇ ಆಕೆಯ ಬದುಕಿನಲ್ಲಿ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಶೇಖರ್ ಅಭಿಪ್ರಾಯಪಟ್ಟರು.

ಸಮೀಪದ ಸುಳುಗಳಲೆ ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಸ್ತಿçÃಶಕ್ತಿ ಒಕ್ಕೂಟ ಹಾಗೂ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆದ ದೌರ್ಜನ್ಯ ಮುಕ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್.ಎನ್. ರಘು ಮಾತನಾಡಿ, ಪ್ರತಿಯೊಬ್ಬರು ಸಂವಿಧಾನದಲ್ಲಿ ಇರುವ ಕಾಯ್ದೆಗಳ ಅರಿವು ಮೂಡಿಸಿಕೊಂಡು ಹಿಂಸಾಚಾರ ಮತ್ತು ದೌರ್ಜನ್ಯ ಮುಕ್ತ ನವಭಾರತವನ್ನು ಕಟ್ಟಬೇಕು. ಮಹಿಳೆಯರು ಸಂಘಟಿತರಾಗಿ ದೌರ್ಜನ್ಯದ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.

ಶ್ರೀ ವಿಘ್ನೇಶ್ವರ ಬಾಲಿಕಾ ವಿದ್ಯಾಸಂಸ್ಥೆ ಅಧ್ಯಾಪಕ ಕೆ.ಪಿ. ಜಯಕುಮಾರ್ ಮಾತನಾಡಿ, ಪ್ರತಿ ಪುರುಷನ ಹಿಂದೆ ಹೆಣ್ಣು ಶಕ್ತಿಯಾಗಿ ನಿಂತಿದ್ದಾಳೆ. ಆದರೂ ದೇಶದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಮಹಿಳಾ ಸಂಘಟನೆಗಳು ಹೆಣ್ಣುಮಕ್ಕಳಿಗೆ ಪೋಕ್ಸೊ ಕಾಯ್ದೆಯ ಅರಿವು ಮೂಡಿಸಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದರು. ದುಂಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಜೆ. ಗಿರೀಶ್ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅಣ್ಣಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿ, ಇಲಾಖೆಯ ಯೋಜನೆ, ಸೌಲಭ್ಯಗಳ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಸ್ತಿçà ಶಕ್ತಿ ಒಕ್ಕೂಟದ ಅಧ್ಯಕ್ಷೆ ಎನ್.ಕೆ. ಸುಮತಿ ಮಾತನಾಡಿ, ದೌರ್ಜನ್ಯ ಮುಕ್ತಿ ಕಾರ್ಯಕ್ರಮ ಮಹಿಳಾಪರ ಕಾರ್ಯಕ್ರಮವಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ತಾಲೂಕು ಸ್ತಿçÃಶಕ್ತಿ ಒಕ್ಕೂಟದ ಕಾರ್ಯದರ್ಶಿ ಎಚ್.ಎಂ. ಹೇಮಾ, ಸದಸ್ಯರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಆರ್. ಮಧು, ಸದಸ್ಯರು, ಪಿಡಿಒ ವೇಣುಗೋಪಾಲ್, ಧನಲಕ್ಷಿö್ಮÃ, ಅಶ್ವಿನಿ, ಸಂಜೀವಿನಿ ಸಂಘದ ಸದಸ್ಯೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.