ಮಡಿಕೇರಿ, ಜ. ೨೨: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅರ್ಥಶಾಸ್ತç ವಿಭಾಗದ ಪ್ರೊ.ಅಮರ್ಥ್ಯಸೇನ್ ವೇದಿಕೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟಿçÃಯ ಸೇವಾ ಯೋಜನಾ ಘಟಕ, ರೆಡ್‌ರಿಬ್ಬನ್ ಘಟಕ, ರೆಡ್‌ಕ್ರಾಸ್‌ರೇಂಜರ್ಸ್-ರೋರ‍್ಸ್, ಕ್ರೀಡಾ ವಿಭಾಗ, ಸಾಂಸ್ಕೃತಿಕ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸಪ್ತಾಹದ ಅಂಗವಾಗಿ ಸರ್ಕಾರಿ ಯೋಜನೆಗಳ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ರವರು ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಜಿಲ್ಲಾಕಾರ್ಮಿಕ ಅಧಿಕಾರಿ ಅನಿಲ್ ಬಗಟಿಯವರು ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಅವಲಂಬಿತರಿಗೆ ಕಾರ್ಮಿಕ ಇಲಾಖೆಯಿಂದ ಸಿಗುವ ಪ್ರಯೋಜನಗಳನ್ನು ವಿವರಿಸಿದರು.

ಕಾರ್ಯಕ್ರಮವನ್ನು ದ್ವಿತೀಯ ಬಿ.ಎ ವಿದ್ಯಾರ್ಥಿ ದೀಪಕ್ ಕೆ.ಎ. ನಿರೂಪಿಸಿ, ದೀಕ್ಷಿತ್ ಸ್ವಾಗತಿಸಿದರು. ಕಾಲೆಜಿನ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ದಯಾನಂದ. ಕೆ.ಸಿ.ಯವರು ವಂದಿಸಿದರು. ವೇದಿಕೆಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶದ ಸಂಚಾಲಕಿ ಮುತ್ತಮ್ಮ. ಕೆ.ಕೆ., ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಶಿಧರ್ ಬಿ.ಆರ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರಕಾಶ್ ಎಂ.ಎನ್., ಡಾ. ನಿರ್ಮಲ ಕೆ.ಡಿ., ಕುಸುಮ ಕೆ.ಪಿ., ರಾಘವೇಂದ್ರ ಪ್ರಸಾದ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಇದ್ದರು.