ಬೆAಗಳೂರು, ಜ. ೨೧: ರಾಜ್ಯದಲ್ಲಿ ಕೋವಿಡ್ ೩ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಜಾರಿ ಮಾಡಿದ್ದ ವೀಕೆಂಡ್ ಕರ್ಫ್ಯೂವನ್ನು ಇದೀಗ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂ ಮಾತ್ರ ಮುಂದುವರೆಸಲಾಗಿದೆ.

ಈ ಸಂಬAಧ ಬೆಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ನಿಯಂತ್ರಣ ಸಂಬAಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ತಜ್ಞರ ಸಲಹೆ ಮೇರೆಗೆ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದ್ದು, ನೈಟ್ ಕರ್ಫ್ಯೂವನ್ನು ಮುಂದಿನ ಆದೇಶದ ತನಕ ಪ್ರತಿದಿನ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ತಜ್ಞರ ವೈಜ್ಞಾನಿಕ ಸಲಹೆಗಳನ್ನು ಪಡೆದು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಆಸ್ಪತ್ರೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಶೇ. ೫ ಮಾತ್ರ ಇದೆ. ಇದು ಹೆಚ್ಚಾದಲ್ಲಿ ಮತ್ತೇ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತದೆ. ಜನರು ಸರಕಾರದ ಮಾರ್ಗಸೂಚಿ ಪಾಲಿಸಬೇಕೆಂದು ಅಶೋಕ್ ಮನವಿ ಮಾಡಿದರು.

ರಾತ್ರಿ ೧೦ ರಿಂದ ಬೆಳಿಗ್ಗೆ ೫ ಗಂಟೆಯ ತನಕ ಮುಂದಿನ ಆದೇಶದ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಉಳಿದೆಲ್ಲ ನಿಯಮಗಳು ಯಥಾಸ್ಥಿತಿಯಲ್ಲಿ ಜಾರಿಯಲ್ಲಿರಲಿದೆ. ಪ್ರತಿಭಟನಾ, ರ‍್ಯಾಲಿ, ಜಾತ್ರೆ, ಸಮಾರಂಭಗಳಿಗೆ ನಿರ್ಬಂಧ ಮುಂದುವರೆಯುತ್ತದೆ.

೫೦-೫೦ ನಿರ್ಬಂಧ ಕೂಡ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಶಾಲಾ-ಕಾಲೇಜುಗಳನ್ನು ಒಂದು ಯೂನಿಟ್ ಎಂದು ಪರಿಗಣಿಸಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದರು.

ಶಾಲೆಗಳಲ್ಲಿ ಪಾಸಿಟಿವ್ ಬಂದ ವಿದ್ಯಾರ್ಥಿಗಳ ಸಂಖ್ಯೆಯ ಅನುಸಾರ ಶಾಲೆ ಬಂದ್ ಮಾಡಲು ಸರಕಾರ ರಚಿಸಿರುವ ಸಮಿತಿಗೆ ಅಧಿಕಾರ ನೀಡಲಾಗಿದೆ. ಕಡಿಮೆ ಸಂಖ್ಯೆ ಪಾಸಿಟಿವ್ ಇದ್ದಲ್ಲಿ ೩ ದಿನ ಹೆಚ್ಚು ಪ್ರಕರಣ ಕಂಡುಬAದಲ್ಲಿ ೭ ದಿನಗಳು ಶಾಲೆ ಬಂದ್ ಮಾಡಲು ಕ್ರಮವಹಿಸಲಾಗಿದೆ ಎಂದು ವಿವರಿಸಿದರು.