ಕುಶಾಲನಗರ, ಜ. ೨೨: ಕುಶಾಲನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಆದಾಯ ತೆರಿಗೆ ಕಮಿಷನರ್ ಜಯರಾಂ ರಾಯ್ ಪೂರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಾಂತ್ರಿಕತೆಯ ಜೊತೆಗೆ ಸಾಹಿತ್ಯ, ಸಾಧಕರ ಜೀವನಚರಿತ್ರೆಯನ್ನು ಓದಬೇಕು. ಅದು ಅವರಲ್ಲಿನ ಮೌಲ್ಯಗಳನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ವಿದ್ಯಾವಂತರಾಗುವ ಜೊತೆಗೆ ಸಂಸ್ಕಾರವAತರಾಗಬೇಕು. ದೊರೆತ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿಭಾಗದ ಮುಖ್ಯಸ್ಥರು, ಬೋಧಕ ಬೋಧಕೇತರ ವರ್ಗದವರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಹಾಜರಿದ್ದರು.