ನಾಪೋಕ್ಲು, ಜ. ೨೨ : ಸ್ಥಳೀಯ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಓರ್ವ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಅವರ ಪೋಷಕರು ಶಾಲೆಯ ಪ್ರಾಂಶುಪಾಲರಿಗೆ ಮಾಹಿತಿ ನೀಡಿದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಗುರುವಾರ ಆರೋಗ್ಯ ತಪಾಸಣೆ ಮಾಡಿಸಿದ್ದು ೩೭ ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೆ ತಪಾಸಣೆ ಮಾಡಿದ್ದು ಒಟ್ಟು ೫೩ ಮಕ್ಕಳಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. ಶಾಲೆಯ ೧೦೬ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಇವರಲ್ಲಿ ೩೭ ಮಕ್ಕಳಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದು, ಶುಕ್ರವಾರ ೧೫೩ ಮಕ್ಕಳಿಗೆ ಪರೀಕ್ಷೆ ನಡೆಸಲಾಗಿದ್ದು ಇವರಲ್ಲಿ ೫೩ ಮಕ್ಕಳಿಗೆ ಲಕ್ಷಣಗಳು ಕಂಡು ಬಂದಿದ್ದು ಒಟ್ಟು ೯೦ ವಿದ್ಯಾರ್ಥಿಗಳು ಕೊರೊನಾ ಪೀಡಿತರಾಗಿದ್ದಾರೆ. ಶನಿವಾರ ಇತರ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರ ವರದಿ ಬರಬೇಕಿದೆ ಎಂದು ಪ್ರಾಂಶುಪಾಲೆ ಕಲ್ಯಾಟಂಡ ಶಾರದ ತಿಳಿಸಿದ್ದಾರೆ. ಶಾಲೆಯಲ್ಲಿ ಒಟ್ಟು ೩೮೪ ವಿದ್ಯಾರ್ಥಿಗಳಿದ್ದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲೆಯಲ್ಲಿ ಸಮಾಲೋಚನಾ ಸಭೆ ನಡೆಸಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಶಾಲೆಗೆ ಒಂದು ವಾರಗಳ ಕಾಲ ರಜೆಯನ್ನು ಘೋಷಿಸಿದ್ದಾರೆ. ತಾ. ೩೦ ರಂದು ಶಾಲೆ ಪುನರಾರಂಭಗೊಳ್ಳಲಿದೆ.

ಈ ಸಂದರ್ಭ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕಲಿಯಂಡ ಹ್ಯಾರಿಮಂದಣ್ಣ, ಪಿಡಿಒ ಚೋಂದಕ್ಕಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮದ್ ಖುರೇಶಿ, ಸದಸ್ಯ ಮಾಚೆಟ್ಟೀರ ಕುಶುಕುಶಾಲಪ್ಪ, ಗ್ರಾಮಲೆಕ್ಕಿಗರಾದ ಅಮೃತ, ಸಿಬ್ಬಂದಿ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆಯರಾದ ಆಶಾಲತ, ಅಜಿತ, ಶಿಕ್ಷಕ ಕಾಳಯ್ಯ ಸೇರಿದಂತೆ ಶಿಕ್ಷಕ, ಸಿಬ್ಬಂದಿ ವೃಂದ ಇದ್ದರು.

- ದುಗ್ಗಳ.

ಹಿತದೃಷ್ಠಿಯಿಂದ ಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಮಾಹಿತಿ ನೀಡಿ, ಈಗಾಗಲೇ ತಾಲೂಕಿನಲ್ಲಿ ಶೇ. ೧೦೦ ರಷ್ಟು ಲಸಿಕೆ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ೧೫ ರಿಂದ ೧೮ ವರ್ಷದ ಮಕ್ಕಳಿಗೂ ಲಸಿಕೆ ಅಳವಡಿಕೆ ಉತ್ತಮ ಪ್ರಗತಿಯನ್ನು ಕಂಡಿದೆ.