ಮಡಿಕೇರಿ, ಜ. ೨೨: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಸದಸ್ಯರನ್ನಾಗಿ ಮಡಿಕೇರಿಯ ಕೆ.ಎಸ್. ರಮೇಶ್ ಹೊಳ್ಳ ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿಯನ್ನು ರಾಜ್ಯವ್ಯಾಪಿ ಪ್ರಬಲಗೊಳಿಸುವ ನಿಟ್ಟಿನಲ್ಲಿ ಸದಸ್ಯರ ನೇಮಕ ನಡೆದಿದ್ದು, ಕೊಡಗು ಜಿಲ್ಲೆಯಿಂದ ರಮೇಶ್ ಹೊಳ್ಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಹಾಸಭಾಧ್ಯಕ್ಷ ಅಶೋಕ್ ಹಾರನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಮೇಶ್ ಹೊಳ್ಳ ಪ್ರಸ್ತುತ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.