ಗೋಣಿಕೊಪ್ಪ ವರದಿ, ಜ. ೨೩: ವಿದ್ಯಾರ್ಥಿ ಜೀವನದಲ್ಲಿ ಎನ್‌ಎಸ್‌ಎಸ್ ಯೋಜನೆಯಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು ಎಂದು ಸಾಹಿತಿ ಡಾ. ಜೆ. ಸೋಮಣ್ಣ ಸಲಹೆ ನೀಡಿದರು.

ಕಾವೇರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಶಕ್ತಿ ಸೇವೆಯ ಮೂಲಕ ಅಭಿವೃದ್ಧಿ ಕಾಣಲು ಮುಂದಾಗಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಸಣ್ಣುವಂಡ ಎಸ್. ಮಾದಯ್ಯ, ಎನ್‌ಎಸ್‌ಎಸ್ ಅಧಿಕಾರಿ ಕುಸುಮ್, ನಿಕಟಪೂರ್ವ ಅಧಿಕಾರಿ ತಿರುಮಲ್ಲಯ್ಯ, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಇದ್ದರು.