ಕೂಡಿಗೆ, ಜ. ೨೨: ಇಲ್ಲಿನ ಕ್ರೀಡಾ ಶಾಲೆಯ ೨೨ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕ್ರೀಡಾ ಶಾಲೆಯ ಪ್ರೌಢಶಾಲಾ ಮತ್ತು ಪದವಿ ಪೂರ್ವ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದ್ದಾಗ ೨೨ ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿ ಗಳನ್ನು ಸೋಮವಾರಪೇಟೆಯ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸ ಲಾಗಿದೆ. ಶಾಲೆಗೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ ಮತ್ತು ಕೂಡಿಗೆ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರು ಭೇಟಿ ನೀಡಿದರು.