ಕೂಡಿಗೆ, ಜ. ೨೪ : ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ೧೧ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈಗಾಗಲೇ ಅರೋಗ್ಯ ಇಲಾಖೆಯ ವತಿಯಿಂದ ಎಲ್ಲಾ ಮಕ್ಕಳ ಕೊರೊನಾ ತಪಾಸಣೆಯನ್ನು ಕಾಲೇಜಿನಲ್ಲಿ ಮಾಡಲಾಗುತ್ತಿದೆ ಇದರ ಜೊತೆಯಲ್ಲಿ ಕಾಲೇಜಿನ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಅವರ ಸೂಚನೆಯಂತೆ ಕಾಲೇಜಿಗೆ ೫ ದಿನಗಳವರೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಕಾಲೇಜಿಗೆ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಮತ್ತು ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ, ಕೂಡಿಗೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.