ಮಡಿಕೇರಿ, ಜ. ೨೪: ಭಾರತ ಸರಕಾರ, ನೆಹರೂ ಯುವಕೇಂದ್ರ ಕೊಡಗು, ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲೂಕು ಯುವ ಒಕ್ಕೂಟ ವೀರಾಜಪೇಟೆ, ಇಂಡಿಯನ್ ಯುವಕ ಸಂಘ ಸೀಗೆತೋಡು ಗೋಣಿಕೊಪ್ಪ, ಗ್ಲೋಬಲ್ ರಿಕ್ರಿಯೇಷನ್ ಕ್ಲಬ್ ಮತ್ತು ಯುವಕ ಸಂಘ ಗೋಣಿಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಮಟ್ಟದ ರಾಷ್ಟಿçÃಯ ಯುವದಿನ ಹಾಗೂ ಯುವ ಸಪ್ತಾಹ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.

ಗೋಣಿಕೊಪ್ಪ ಹರಿಶ್ಚಂದ್ರಪುರದ ಮಹಿಳಾ ಸಮಾಜ ಸಭಾಂಗಣದಲ್ಲಿ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ವನ್ನು ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿ ಕೊಂಡಲ್ಲಿ ಎಲ್ಲಾ ಸಮಸ್ಯೆಗಳಿಂದ, ವೈಯಕ್ತಿಕ ನ್ಯೂನತೆಗಳಿಂದ ಹೊರಬಂದು ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಎನ್.ಎಸ್. ಕಂದಾದೇವಯ್ಯ ವಿವೇಕಾನಂದರ ಜೀವನಸಂದೇಶ, ಅವರ ಉದಾತ್ತ ಮನೋಭಾವ, ಅವರ ವೈಚಾರಿಕ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಶೀಲಾಬೋಪಣ್ಣ ಮಾತನಾಡಿ, ವಿವೇಕಾನಂದರ ಇಡೀ ಬದುಕೇ ಯುವಜನರಿಗೆ ಆದರ್ಶಪ್ರಾಯವಾಗಿದ್ದು, ಅವರು ನೀಡಿದ ಸಂದೇಶಕ್ಕೆ ಚ್ಯುತಿ ಬಾರದಂತೆ ಯುವಜನತೆ ನಡೆದುಕೊಳ್ಳುವ ಮೂಲಕ ಬಲಿಷ್ಠ ಭಾರತ ಕಟ್ಟಲು ಸಾಧ್ಯ ಎಂದರು.

ಇದೇ ಸಂದರ್ಭ ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್ ಅವರನ್ನು ಸನ್ಮಾನಿಸ ಲಾಯಿತು. ವೇದಿಕೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತ, ಗ್ರಾಮ ಪಂಚಾಯಿತಿ ಸದಸ್ಯ ಅಫ್ಜಲ್, ಗ್ಲೋಬಲ್ ಯುವಕ ಸಂಘದ ಅಧ್ಯಕ್ಷ ಕರ್ತಂಡ ಸೋಮಣ್ಣ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ಸರ್ವದೈವತಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳ ಕುರಿತಾಗಿ ಭಾಷಣ, ಪ್ರಬಂಧ, ಚಿತ್ರಕಲೆ, ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಕ್ಷರ ಮಹಿಳಾ ಸಂಘದ ಸದಸ್ಯೆ ಲತಾ ಪ್ರಾರ್ಥಿಸಿ, ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಡಾಡು ಜೋಸೆಫ್ ಸ್ವಾಗತಿಸಿ ನಿರೂಪಿಸಿ, ವಂದಿಸಿದರು.