ಸೋಮವಾರಪೇಟೆ,ಜ.೨೪: ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆ, ಪಟ್ಟಣ ಪಂಚಾಯಿತಿ ವತಿಯಿಂದ ನಗರದ ಜನನಿಬಿಡ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಿಸಲಾಯಿತು.

ಪ.ಪA.ನ ಪೌರ ಕಾರ್ಮಿಕರು ಪಟ್ಟಣ ವ್ಯಾಪ್ತಿಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ, ಅಂಗಡಿ ಮುಂಗಟ್ಟುಗಳ ಮುಂಭಾಗ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಿಸಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸ್ತುತ ೨೫ ಮಂದಿ ಸೋಂಕಿತರಿದ್ದು, ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಕಳೆದ ೧೦ ದಿನಗಳಲ್ಲಿ ೩೧ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ೬ ಮಂದಿ ಕ್ವಾರಂಟೈನ್ ಅವಧಿ ಮುಗಿಸಿದ್ದು, ಸೀಲ್‌ಡೌನ್ ತೆರವುಗೊಳಿಸಲಾಗಿದೆ. ಉಳಿದಂತೆ ೨೫ ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.

ಪAಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುತ್ತಿದೆ. ಹೊಟೇಲ್, ಕ್ಯಾಂಟೀನ್‌ಗಳಲ್ಲೂ ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಅಂಗನವಾಡಿಗಳಿಗೆ ಕಳೆದ ತಾ.೨೦ರಿಂದ ಒಂದು ವಾರಗಳ ಕಾಲ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಪಂಚಾಯಿತಿಯೊAದಿಗೆ ಸಹಕರಿಸಬೇಕೆಂದು ಮುಖ್ಯಾಧಿಕಾರಿ ನಾಚಪ್ಪ ಮನವಿ ಮಾಡಿದ್ದಾರೆ.