ಮಡಿಕೇರಿ, ಜ. ೨೪ : ತಾಲೂಕಿನ ವಿವಿಧ ಗ್ರಾ.ಪಂ.ಗಳ ಕೋವಿಡ್-೧೯ ನಿಯಂತ್ರಣ ಕಾರ್ಯಪಡೆ ಸಮಿತಿ ಸಭೆಯು ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು.
ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ವೈರಸ್ ಸಂಬAಧಿಸಿದAತೆ ಯಾವುದೇ ರೀತಿಯ ಉದಾಸೀನ ಮಾಡದೆ, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅವರು ಸೂಚಿಸಿದರು. ಅರ್ಹರೆಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಮನವರಿಕೆ ಮಾಡುವಂತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು. ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಪಿ.ಲಕ್ಷಿö್ಮ, ತಾ.ಪಂ.ಇಒ ಶೇಖರ್, ತಹಶೀಲ್ದಾರ್ ಮಹೇಶ್, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್ ಇತರರು ಇದ್ದರು.