ಮಡಿಕೇರಿ, ಜ. ೨೪ : ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ ೧೯೬೩ ರ ಕಲಂ ೩ ಹಾಗೂ ಕರ್ನಾಟಕ ನಿಯಮಗಳು ೧೯೬೪ ರ ನಿಯಮ ೯ ರ ಮೇರೆಗೆ ಕೊಡಗು ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್‌ಗಳು, ರೆಸಾರ್ಟ್ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಪ್ಲಾಂಟೇಷನ್‌ಗಳು ಹಾಗೂ ಇತರೆ ಸಂಸ್ಥೆಗಳು ತಾ. ೨೬ ರ ಗಣರಾಜ್ಯೋತ್ಸವ ದಿನದಂದು ಕಡ್ಡಾಯವಾಗಿ ತಮ್ಮಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಲು ಸೂಚಿಸಿದೆ.

ತಪ್ಪಿದಲ್ಲಿ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಗಾಗಿ ಸಂಬAಧಿಸಿದವರ ವಿರುದ್ಧ ಕಾಯ್ದೆ ಮತ್ತು ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ತಿಳಿಸಿದ್ದಾರೆ.