ಪೊನ್ನಂಪೇಟೆ, ಜ. ೨೫: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ಇಂದು ಕೊಡಗಿನ ಬಹಳಷ್ಟು ಗ್ರಾಮೀಣ ರಸ್ತೆಗಳು ಸುಧಾರಣೆಯಾಗಿವೆ. ಅಲ್ಲದೆ, ಈ ಯೋಜನೆ ಜನರಲ್ಲಿ ವಿಶ್ವಾಸ ಮೂಡಿಸಲು ಯಶಸ್ವಿಯಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು.

ಬಿಟ್ಟಂಗಾಲ ಸಮೀಪದ ವಿ.ಬಾಡಗ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೂ ೭.೧ ಕೋಟಿ ವೆಚ್ಚದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಲಾದ ೮.೯ಕಿ. ಮೀ. ಉದ್ದದ ಬಿಟ್ಟಂಗಾಲ- ನಾಂಗಾಲ-ವಿ.ಬಾಡಗ- ಕುಟ್ಟಂದಿ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಷ್ಟಿçÃಯ ಹೆದ್ದಾರಿ ನಿರ್ಮಾಣದ ಜೊತೆಗೆ ಗ್ರಾಮೀಣ ರಸ್ತೆಯನ್ನು ಉತ್ತಮಗೊಳಿಸಬೇಕು ಎಂಬುವುದು ಕೇಂದ್ರ ಸರಕಾರದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಪ್ರತಿ ಬಜೆಟ್‌ನಲ್ಲಿ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಹೆಚ್ಚಿನ ಅನುದಾನ ಮೀಸಲಿಡುತ್ತಿದೆ ಎಂದು ತಿಳಿಸಿದರು.

ಮುಖ್ಯವಾಗಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲೆಂದೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇಂದು ಈ ಯೋಜನೆ ಇಡೀ ದೇಶದಾದ್ಯಂತ

(ಮೊದಲ ಪುಟದಿಂದ) ಹೆಚ್ಚು ಜನಪ್ರಿಯಗೊಂಡಿದೆ. ಪ್ರತಿ ಗ್ರಾಮಗಳಲ್ಲೂ ಗ್ರಾಮ ಸಡಕ್ ಯೋಜನೆಯನ್ನು ಜಾರಿಗೆ ತರಬೇಕೆಂಬ ಬೇಡಿಕೆ ದಿನೇ ದಿನೇ ಹೆಚ್ಚುತ್ತಿದೆ. ಇದೊಂದು ಉತ್ತಮ ಬೆಳವಣಿಗೆ ಎಂದು ಅಭಿಪ್ರಾಯಪಟ್ಟ ಅವರು, ಶೇ. ೬೦ ರಷ್ಟು ಕೇಂದ್ರ ಸರ್ಕಾರ ಮತ್ತು ಶೇ.೪೦ ರಷ್ಟು ರಾಜ್ಯ ಸರಕಾರ ಅನುದಾನ ಒದಗಿಸುವ ಈ ಯೋಜನೆಯ ಕಾಮಗಾರಿ ಹೆಚ್ಚು ಗುಣಮಟ್ಟದಿಂದ ನಡೆಯುವುದರಿಂದ ಜನರ ವಿಶ್ವಾಸಗಳಿಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಡೆದ ಕಾಮಗಾರಿಯನ್ನು ಆಯಾ ಗುತ್ತಿಗೆದಾರರು ೫ವರ್ಷಗಳ ಕಾಲ ನಿರ್ವಹಣೆ ಮಾಡಲಿದ್ದಾರೆ. ಬಳಿಕ ೬ನೇ ವರ್ಷದಲ್ಲಿ ಅದೇ ರಸ್ತೆ ಮರು ಡಾಂಬರೀಕರಣಗೊಳ್ಳಲಿದೆ. ಇದರಿಂದ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ೩ನೇ ಹಂತದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯಕ್ಕೆ ರೂ. ೫೬೦೦ ಕೋಟಿ ಅನುದಾನ ಒದಗಿಸಿದ್ದಾರೆ. ಈ ಪೈಕಿ ಕೊಡಗು ಜಿಲ್ಲೆಗೆ ರೂ.೭೮ ಕೋಟಿ ಅನುದಾನ ಮಂಜೂರಾಗಿದೆ ಎಂದು ವಿವರಿಸಿದರು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಗಳನ್ನು ಆಯ್ಕೆಗೊಳಿಸುವಲ್ಲಿ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ವಿಶೇಷ ಆಸಕ್ತಿ ವಹಿಸುತ್ತಿದ್ದು, ಗ್ರಾಮೀಣ ಭಾಗದ ರಸ್ತೆ ಸುಧಾರಣೆಗಾಗಿ ಹೆಚ್ಚು ಬೇಡಿಕೆ ಇರುವ ರಸ್ತೆಗಳನ್ನೇ ಆಯ್ಕೆಗೊಳಿಸಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಜಿ. ಬೋಪಯ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ವೀರಾಜಪೇಟೆ ತಾಲೂಕು ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವೀರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಜಿಲ್ಲಾ ಬಿಜೆಪಿ ಪ್ರಮುಖರಾದ ಚೋಡುಮಾಡ ಶ್ಯಾಮ್ ಪೂಣಚ್ಚ, ಜಿ.ಪಂ. ಮಾಜಿ ಸದಸ್ಯೆ ಅಪ್ಪಂಡೇರAಡ ಭವ್ಯ ಚಿಟ್ಯಣ್ಣ, ವೀರಾಜಪೇಟೆ ತಾಲೂಕು ಬಿಜೆಪಿ ಕಾರ್ಯದರ್ಶಿ ಅಮ್ಮುಣಿಚಂಡ ರಂಜಿ ಪೂಣಚ್ಚ, ಬಿಟ್ಟಂಗಾಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅಪ್ಪಂಡೇರAಡ ದಿನೇಶ್ (ದಿನು), ಸಹ ಪ್ರಮುಖ್ ಕುಪ್ಪಂಡ ದಿಲನ್ ಬೋಪಣ್ಣ, ಬಿಟ್ಟಂಗಾಲ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಮಚ್ಚಾರಂಡ ಪ್ರವೀಣ್, ಬಿಟ್ಟಂಗಾಲ ಗ್ರಾ.ಪಂ. ಸದಸ್ಯರಾದ ಅಮ್ಮೆಕಂಡ ಜನಿತಾ, ಎರವರ ಅಕ್ಕಚ್ಚಿ, ವಿ. ಬಾಡಗ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಕುಪ್ಪಂಡ ಮೋಹನ್ ಮೊಣ್ಣಪ್ಪ, ಕಾರ್ಯದರ್ಶಿ ತೀತಿಮಾಡ ಬೋಪಣ್ಣ, ಯೋಜನೆಯ ಗುತ್ತಿಗೆದಾರ ನಾರಾಯಣ ಸುಳ್ಯ, ಗ್ರಾಮದ ಪ್ರಮುಖರಾದ ನಂಬುಡುಮಾಡ ಮುದ್ದಪ್ಪ, ಕೊಂಗAಡ ಅಚ್ಚಯ್ಯ, ಕೋಲತಂಡ ಸುಬ್ರಮಣಿ, ಕಂಜಿತAಡ ಪೂವಣ್ಣ. ಮಳವಂಡ ಮುತ್ತಪ್ಪ, ಕಂಜಿತAಡ ಮಧು, ಅಮ್ಮುಣಿಚಂಡ ರೋಹಿತ್, ಕರ್ತಮಾಡ ರವಿ ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಜರಿದ್ದರು.