ಮಡಿಕೇರಿ, ಜ. ೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೊಡಗು ಜಿಲ್ಲಾ ಪ್ರಾಣಿದಯಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಜಿಲ್ಲಾ ಗೋಶಾಲೆಯ ಪ್ರಾರಂಭೋತ್ಸವದ ಭೂಮಿ ಪೂಜಾ ಕಾರ್ಯಕ್ರಮವು ತಾ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಕೆ. ನಿಡುಗಣೆ ಗ್ರಾಮದಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ. ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಎಸ್. ರವಿ ಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷ ಕೆ.ಕೆ. ಅಯ್ಯಪ್ಪ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘದ ಅಧ್ಯಕ್ಷ ಡಾ. ಬಿ.ಸಿ. ಸತೀಶ, ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಪಿ. ಸುರೇಶ್ ಭಟ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಆರ್.ಜಿ. ಸಚಿನ್, ಕೆ.ನಿಡುಗಣೆ ಗ್ರಾ.ಪಂ. ಸದಸ್ಯರು, ಕೊಡಗು ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯರು, ಇತರರು ಪಾಲ್ಗೊಳ್ಳಲಿದ್ದಾರೆ.