ಮಡಿಕೇರಿ, ಜ.೨೫: ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ತಾ. ೨೬ ರಂದು (ಇಂದು) ಬೆಳಗ್ಗೆ ೯ ಗಂಟೆಗೆ ೭೩ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ಲಸಿಕೆ ವಿತರಣೆ ಹಾಗೂ ಕೋವಿಡ್-೧೯ ನಿಯಂತ್ರಣದ ಬಗ್ಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ಕೊಡಗು ಜಿಲ್ಲೆಯ ಶೈಕ್ಷಣಿಕ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.