ಮಡಿಕೇರಿ, ಜ. ೨೫: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಪಟ್ಟಣ ಗ್ರಾಮದ ಭಾಗಶಃ ಸರ್ವೆ ನಂಬರುಗಳ ಪ್ರದೇಶಗಳನ್ನು ಸೇರಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿAದ ಜಾರಿಗೆ ಬರುವಂತೆ ಸಣ್ಣ ನಗರ ಪ್ರದೇಶವೆಂದು ಉದ್ಘೋಷಿಸಿ ಈ ಸಣ್ಣ ನಗರ ಪ್ರದೇಶವನ್ನು ಕುಶಾಲನಗರ ಪುರಸಭೆ ಪ್ರದೇಶವೆಂದು ಸಹ ಪದನಾಮೀಕರಿಸಲು ಹಾಗೂ ಸಣ್ಣ ನಗರ ಪ್ರದೇಶಕ್ಕೆ ಪುರಸಭೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆಗಳನ್ನು/ ಸಲಹೆಗಳನ್ನು ಸಲ್ಲಿಸಲು ಇಚ್ಚಿಸುವವರು ಲಿಖಿತದಲ್ಲಿ ಕಾರಣ ಸಹಿತವಾಗಿ ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿAದ ಮೂವತ್ತು ದಿನಗಳೊಳಗಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ೯ ನೇ ಮಹಡಿ ವಿ,ವಿ ಗೋಪುರ ಬೆಂಗಳೂರು ಇವರಿಗೆ ಸಲ್ಲಿಸಬೇಕೆಂದು ಹಾಗೂ ಅಧಿಸೂಚನೆಯನ್ನು ಅವಧಿಯ ತರುವಾಯ ನಿಗದಿತ ಸಮಯದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್. ಪ್ರಸಾದ್ ತಿಳಿಸಿದ್ದಾರೆ.