*ಸಿದ್ದಾಪುರ ಜ. ೨೬: ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೪೫ ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ನೂತನ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿತು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಉದ್ಘಾಟಿಸಿ, ಭೂಮಿಪೂಜೆ ನೆರವೇರಿಸಿದರು. ತಾ.ಪಂ. ಮಾಜಿ ಸದಸ್ಯ ವಿಜು ಚಂಗಪ್ಪ, ಗ್ರಾ.ಪಂ. ಉಪಾಧ್ಯಕ್ಷ ಲೋಕನಾಥ್, ಬಿಜೆಪಿ ಶಕ್ತಿ ಕೇಂದ್ರದ ನವೀನ್, ಹಿಂದುಳಿದ ವರ್ಗ ಘಟಕದ ತಾಲೂಕು ಉಪಾಧ್ಯಕ್ಷ ಟಿ.ಕೆ. ಸುಮೇಶ್ ಹಾಗೂ ವಿವಿಧ ಮೋರ್ಚಾಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು.