ಮಡಿಕೇರಿ, ಜ. ೨೬: ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಯುವಜನರ ಪಾತ್ರ ಪ್ರಮುಖ ವಾಗಿದ್ದು, ಆ ದಿಸೆಯಲ್ಲಿ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವ ಮತದಾರರು ಕೈಜೋಡಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ್ ಭೀಮರಾವ್ ಲಗಮಪ್ಪ ಕರೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಮತದಾರರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ಅಸ್ತಿತ್ವಕ್ಕೆ ಬಂದ ದಿನವನ್ನು ರಾಷ್ಟಿçÃಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ಕೈಜೋಡಿಸ ಬೇಕು; ಮತದಾನದ ಮಹತ್ವ, ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಸಮಾಜದಲ್ಲಿ ಸುಧಾರಣೆಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಪ್ರಮುಖ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿ ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ತು, ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳು, ಸಹಕಾರ ಸಂಘಗಳು ಹೀಗೆ ಚುನಾವಣೆ ವ್ಯವಸ್ಥೆಗಳನ್ನು ಕಾಣಬಹುದಾಗಿದೆ ಎಂದು ವಿವರಿಸಿದರು.
ಚುನಾವಣೆ ಪ್ರಕ್ರಿಯೆ ಮತದಾರರ ಪಟ್ಟಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳು ೬ ತಿಂಗಳು ಮುಂಚಿತವಾಗಿ ಆರಂಭವಾಗುತ್ತದೆ. ಮನೆ ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿ, ಮತದಾರರ ಗುರುತಿನ ಚೀಟಿ ಮತ್ತಿತರ ಮಾಹಿತಿ ಪಡೆಯ ಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತಿತರ ಕಾರ್ಯಗಳು ನಡೆಯಲಿವೆ ಎಂದರು.
ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಸಂವಿಧಾನ ನೀಡಿರುವ ಅಧಿಕಾರವನ್ನು ಸಮರ್ಥವಾಗಿ ಯುವಜನರು ಬಳಸಿಕೊಳ್ಳು ವಂತಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಮಾತನಾಡಿ ಸ್ವಾತಂತ್ರö್ಯಕ್ಕೂ ಮೊದಲು ದೇಶದಲ್ಲಿ ಹಲವರು ಆಡಳಿತ ನಡೆಸಿದ್ದಾರೆ. ಸ್ವಾತಂತ್ರö್ಯ ನಂತರ ನಮ್ಮದೇ ಆದ ಸಂವಿಧಾನ ಜಾರಿಗೆ ಬಂದಿದೆ. ಆ ದಿಸೆಯಲ್ಲಿ ಸಂವಿಧಾನ ಜಾರಿಗೆ ಬರುವುದಕ್ಕೂ ಮೊದಲ ದಿನ ಮುಂಚಿತವಾಗಿ ಮತದಾರರ ದಿನ ಆಚರಿಸಲಾಗುತ್ತಿದೆ ಎಂದರು.
ಈ ಹಿಂದೆ ಭಾರತ ಚುನಾವಣಾ ಆಯೋಗಕ್ಕೆ ಅಧ್ಯಕ್ಷರಾಗಿದ್ದ, ಟಿ.ಎನ್. ಶೇಷನ್ ಅವರು ಚುನಾವಣೆ ಸಂಬAಧ ಅಮೂಲಾಗ್ರ ಬದಲಾವಣೆ ತಂದರು. ಮತದಾರರ ಭಾವಚಿತ್ರ ಒಳಗೊಂಡ ಗುರುತಿನ ಚೀಟಿ ಸೇರಿದಂತೆ ಸಾಕಷ್ಟು ಸುಧಾರಣೆ ತಂದರು ಎಂದರು. ರಾಷ್ಟçದ ಪ್ರಜೆಗಳಾಗಿ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ಅಬ್ರಾಹಂ ಲಿಂಕನ್ ಅವರು ಒತ್ತಿ ಹೇಳಿದ್ದಾರೆ ಎಂದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಮಾತನಾಡಿ, ರಾಷ್ಟçದಲ್ಲಿ ೧೮ ವರ್ಷ ಮೇಲ್ಪಟ್ಟವರೆಲ್ಲರಿಗೂ ಮತಹಕ್ಕು ಚಲಾಯಿಸುವ ಅವಕಾಶ ಮಾಡಲಾಗಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು. ಚುನಾವಣಾ ಸಂದರ್ಭದಲ್ಲಿ ಮತದಾರರ ಶಿಕ್ಷಣ ಮತ್ತು ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತು ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಮತದಾನದ ದಿನದ ಮಹತ್ವ ಕುರಿತು ಮಾತನಾಡಿದರು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಬೋಧಿಸಿದರು. ರಾಷ್ಟಿçÃಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪತ್ರ ನೀಡಲಾಯಿತು.
ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು. ಉತ್ತಮ ಮತಗಟ್ಟೆ ಅಧಿಕಾರಿಯವರನ್ನು ಗೌರವಿಸ ಲಾಯಿತು. ರಾಷ್ಟಿçÃಯ ಮತದಾರರ ದಿನದ ಪ್ರಯುಕ್ತ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಗೋಣಿಕೊಪ್ಪ ವಿದ್ಯಾನಿಕೇತನ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸತೀಶ ವಿ.ಎನ್. ಅವರನ್ನು ಗೌರವಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದ ಮೂರ್ತಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಇತರರು ಇದ್ದರು. ಶಿಕ್ಷಕಿ ಅನಿತಾ ನಿರೂಪಿಸಿದರು. ತಹಶೀಲ್ದಾರ್ ಮಹೇಶ್ ವಂದಿಸಿದರು.