ಮುಳ್ಳೂರು, ಜ. ೨೬: ಸಮೀಪದ ಗೋಣಿಮರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ಡಿಎಂಸಿ, ಹಳೆ ವಿದ್ಯಾರ್ಥಿಗಳ ಸಂಘ, ಎಸ್ಡಿಎಂಸಿ ಸಮನ್ವಯ ವೇದಿಕೆ, ಶಿಕ್ಷಕರ ವರ್ಗ, ಶಾಲಾ ಧನ್ವಂತರಿ ಇಕೋ ಕ್ಲಬ್ ಹಾಗೂ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೊನಾ ಮತ್ತು ಲಸಿಕಾ ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಎಸ್ಡಿಎಂಸಿ ಅಧ್ಯಕ್ಷ ಟಿ.ಡಿ. ಅನಿಲ್ಕುಮಾರ್ ಚಾಲನೆ ನೀಡಿದರು.
ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಮಾತನಾಡಿ, ಪ್ರತಿಯೊಬ್ಬರು ಕೊರೊನಾ ಬಗ್ಗೆ ಜಾಗೃತಗೊಳ್ಳುವುದರ ಜೊತೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಈಗಾಗಲೇ ೨ನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿದ್ದು ಎಲ್ಲರೂ ತಪ್ಪದೆ ೨ನೇ ಹಂತದ ಲಸಿಕೆ ಹಾಕಿಸಿಕೊಳ್ಳಬೇಕೆಂಬ ಉದ್ದೇಶದಿಂದ ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮದಲ್ಲಿ ಜನ ಜಾಗೃತಿ ಅಭಿಯಾನ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.ಶಾಲಾ ಮುಖ್ಯ ಶಿಕ್ಷಕಿ ಸುನೀತ ಮಾತನಾಡಿ, ಇದುವರೆಗೂ ಯಾರೂ ಲಸಿಕೆ ಪಡೆದಿಲ್ಲವೋ ಅವರು ತಪ್ಪದೇ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಕೊರೊನಾ ಮುಕ್ತ ಗ್ರಾಮವನ್ನಾಗಿ ಮಾಡಲು ಸಹಕರಿಸುವಂತೆ ಮನವಿ ಮಾಡಿದರು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸಮನ್ವಯ ವೇದಿಕೆಯ ರಾಜ್ಯಾಧ್ಯಕ್ಷ ಸಿದ್ದಲಿಂಗಪ್ಪ, ಹಳೆ ವಿದ್ಯಾರ್ಥಿ
ಸಂಘದ ಅಧ್ಯಕ್ಷ ಸುರೇಂದ್ರ, ಪ್ರೌಢಶಾಲಾ ಮುಖ್ಯ ಶಿಕ್ಷಕ ವೀರಪ್ಪ ಮಡಿವಾಳ, ಮಾಜಿ ಎಸ್ಡಿಎಂಸಿ ಅಧ್ಯಕ್ಷ ಕೆಂಪರಾಜು, ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಸೇರಿ ಶಾಲಾ ಆವರಣದಿಂದ ಹೊರಟು ಗ್ರಾಮದ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.