ಸಿದ್ದಾಪುರ, ಜ. ೨೬: ಅಮ್ಮತ್ತಿ ಹೋಬಳಿ ವ್ಯಾಪ್ತಿಗೆ ಒಳಪಡುವ ಹಾಲುಗುಂದ ಹಾಗೂ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಟಾಸ್ಕ್ಫೋರ್ಸ್ ಸಭೆ ನಡೆಯಿತು. ಹಾಲುಗುಂದ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ, ಕೊರೊನಾ ಸೋಂಕುವಿನ ಬಗ್ಗೆ ಗ್ರಾಮಸ್ಥರು ಎಚ್ಚರ ವಹಿಸಬೇಕೆಂದು ತಿಳಿಸಿದರು.
ಸೋಂಕು ಹರಡದಂತೆ ಸಾಮಾಜಿಕ ಅಂತರ ಕಾಯ್ದು ಕೊಂಡು ಕಡ್ಡಾಯ ಮಾಸ್ಕ್ ಧರಿಸ ಬೇಕೆಂದರು. ಜ್ವರ, ಶೀತ ಇತ್ಯಾದಿಗಳು ಕಂಡು ಬಂದಲ್ಲಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ಮಾಡಿಸಿಕೊಳ್ಳುವಂತೆ ತಿಳಿಸಿದರು. ಪ್ರತಿಯೊಬ್ಬರು ಸರ್ಕಾರದ ವತಿಯಿಂದ ನೀಡುತ್ತಿರುವ ಕೊರೊನಾ ನಿರೋಧಕ ಲಸಿಕೆಯನ್ನು ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳುವಂತೆ ಮನವಿ ಮಾಡಿ ಕೊಂಡರು. ವೀರಾಜಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ ಮಾತನಾಡಿ, ಗ್ರಾಮ ಪಂಚಾಯಿ ತಿಯ ವ್ಯಾಪ್ತಿಯಲ್ಲಿ ಗ್ರಾಮಸ್ಥರಿಗೆ ಸೋಂಕು ಬಂದಲ್ಲಿ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಬೇಕು. ಸೋಂಕಿನ ಬಗ್ಗೆ ನಿರ್ಲಕ್ಷö್ಯವಹಿಸಬಾರದೆಂದರು. ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷರುಗಳು, ಪಿ.ಡಿ.ಓ.ಗಳು, ಶುಶ್ರೂಷಕಿಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮ ಲೆಕ್ಕಿಗ ಓಮಪ್ಪ ಬಣಾಕರ್ ಹಾಜರಿದ್ದರು.