ಚೆಯ್ಯAಡಾಣೆ, ಜ. ೨೬: ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯ ರಸ್ತೆಯ ಉದ್ಘಾಟನೆ ಯನ್ನು ಮರಂದೋಡದಲ್ಲಿ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಂಸದರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೇಶದ ನಾಲ್ಕು ಮೂಲೆಗಳನ್ನು ಸಂಪರ್ಕಿಸಲು ಅನುವಾಗಬಲ್ಲ ೧೩ ಸಾವಿರ ಕಿಲೋಮೀಟರ್ ರಸ್ತೆಯನ್ನು ನಿರ್ಮಾಣ ಮಾಡಿದರು. ಅಭಿವೃದ್ಧಿ ಪ್ರಕ್ರಿಯೆ ಕೇವಲ ರಾಷ್ಟಿçÃಯ ಹೆದ್ದಾರಿಗಳನ್ನು ನಿರ್ಮಾಣ ಮಾಡುವುದಕ್ಕೆ ಸೀಮಿತಗೊಳಿಸದೆ ಹಳ್ಳಿ ಹಳ್ಳಿಗಳನ್ನು ಸಂಪರ್ಕಿಸುವ ಉತ್ತಮ ರಸ್ತೆಗಳ ಅನಿವಾರ್ಯತೆಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಜಾರಿಗೆ ತಂದರು. ಅದರ ಪರಿಣಾಮ ಇಂದು ಯಾವುದೇ ಹಳ್ಳಿಗಳಿಗೆ ತೆರಳಿದರೂ ಪ್ರದೇಶವಾಸಿಗಳು ಗ್ರಾಮ ಸಡಕ್ ಯೋಜನೆಯ ರಸ್ತೆ ನಿರ್ಮಿಸಿ ಕೊಡಿಯೆಂದು ಬೇಡಿಕೆಯಿಡುತ್ತಿರು ವುದು ರಸ್ತೆಯ ವಿಶ್ವಾಸಾರ್ಹತೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯ ಅನುಷ್ಠಾನಕ್ಕೆ ಮುತುವರ್ಜಿ ವಹಿಸಿ ಮೂರನೇ ಹಂತದ ಗ್ರಾಮ ಸಡಕ್ ಯೋಜನೆಗಾಗಿ ಕರ್ನಾಟಕಕ್ಕೆ ೫,೬೦೦ ಕೋಟಿ ರೂಪಾಯಿಯನ್ನು ಮಂಜೂರು ಮಾಡಿಸಿದ್ದಾರೆ. ಶಾಸಕ ಕೆ.ಜಿ. ಬೋಪಯ್ಯ ಬೇಡಿಕೆಗೆ ಸ್ಪಂದಿಸಿ ಕ್ಷೇತ್ರದ ಮರಂದೋಡದಿAದ ಕೋಕೇರಿ ಬಾವಲಿ ರಸ್ತೆಯ ೬ ಕಿಲೋಮೀಟರ್ ರಸ್ತೆಯನ್ನು ದುರಸ್ತಿ ಮಾಡಲಾಗಿದೆ ಎಂದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕೋಕೇರಿ, ಕೊಳಕೇರಿ ರಸ್ತೆಯನ್ನು ಹಾಗೂ ಚೆಯ್ಯಂಡಾಣೆ ಪಾರಾಣೆ ರಸ್ತೆಯನ್ನು ಆದಷ್ಟು ಬೇಗ ದುರಸ್ತಿಪಡಿಸಲಾಗುವುದು. ಇದಕ್ಕೆ ಈಗಾಗಲೇ ಅನುದಾನ ದೊರೆತಿದೆ. ಕಾಮಗಾರಿ ಕೂಡಲೇ ಕೈಗೊಳ್ಳಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಪಾರಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೆಳ್ಳಿಯಮ್ಮಯ್ಯ, ಚೆಯ್ಯಂಡಾಣೆ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪೋಕುಳಂಡ್ರ ದನೋಜ್, ಪಾರಾಣೆ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪನೆರವಂಡ ರಾಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಉಷಾ ದೇವಮ್ಮ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪವನ್ ತೋಟಬೈಲು, ಕೋಡಿರ ಪ್ರಸನ್ನ ತಮ್ಮಯ್ಯ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಕೊಕೇರಿ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚೇನಂಡ ಜೆಪ್ಪು ಸ್ವಾಗತಿಸಿ ವಂದಿಸಿದರು.