ಭಾಗಮಂಡಲ, ಜ. ೨೬: ನೂತನ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಬುಧವಾರ ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಮಾರ್ ಭಾಗಮಂಡಲದಲ್ಲಿ ಬಸ್ ನಿಲ್ದಾಣಕ್ಕಾಗಿ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವ ನಾಗೇಶ್ ಭರವಸೆ ನೀಡಿದರು. ಈ ಸಂದರ್ಭ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ರಾಜೀವ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಳನ ರವಿ, ಶಿರಕಜೆ ನಾಗೇಶ್, ಚಲನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.