*ಸಿದ್ದಾಪುರ, ಜ. ೨೫: ನೆಲ್ಲಿಹುದಿಕೇರಿಯಲ್ಲಿ ಮೀನು ಮಾರುಕಟ್ಟೆವರೆಗಿನ ರಸ್ತೆ ವಿಸ್ತರಣೆ ಕಾರ್ಯ ಬಿರುಸುಗೊಂಡಿದೆ. ಸುಮಾರು ರೂ. ೩ ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸೂಚನೆ ನೀಡಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ತಿಳಿಸಿದ್ದಾರೆ.

ಡಾಂಬರೀಕರಣ ಮತ್ತು ಚರಂಡಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ವಿಸ್ತರಣೆ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ವಾಹನ ಚಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.