ಗೋಣಿಕೊಪ್ಪಲು, ಜ. ೨೬: ಮುಂಬರಲಿರುವ ಜಿ.ಪಂ, ತಾಲೂಕು ಪಂಚಾಯಿತಿ ಹಾಗೂ ವಿಧಾನ ಸಭೆಗೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರು ಬೂತ್ ಮಟ್ಟದಿಂದ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕು ಹಾಗೂ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಪಕ್ಷದ ಪಳೆಯಂಡ ರಾಬಿನ್ ದೇವಯ್ಯ ಕರೆ ನೀಡಿದರು.

ಹುದಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಸುಜಾ ಕುಶಾಲಪ್ಪ ನವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಇವರು, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸುಭದ್ರವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ತಿಳಿಸಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಬಿಜೆಪಿ ಪಕ್ಷ ವ್ಯಕ್ತಿ ಅಥವಾ ಗುಂಪಿನ ಪಕ್ಷವಲ್ಲ, ತನ್ನದೇ ಆದ ಸಿದ್ದಾಂತದ ಮೇಲೆ, ರಾಷ್ಟಿçÃಯತೆಯಿಂದ ನೆಲೆನಿಂತ ಪಕ್ಷ ಹೀಗಾಗಿ ದೇಶದಲ್ಲಿ ಪಕ್ಷವು ಅಧಿಕಾರದಲ್ಲಿದ್ದೇವೆ.

ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಸಿಗುವ ಪರಿಹಾರದಲ್ಲಿ ರೆವಿನ್ಯೂ ಇಲಾಖೆಯ ಬೇಜವಾಬ್ದಾರಿ ಹಾಗೂ ಕಾಫಿ ಬೋರ್ಡ್ನ ಅಸಡ್ಡೆತನದಿಂದ ಇನ್ನೂ ಕೂಡ ಸರಿಯಾಗಿ ರೈತರಿಗೆ ಪರಿಹಾರ ತಲುಪಿಲ್ಲ. ಈ ಬಗ್ಗೆ ಇಲಾಖೆಗೆ ಸ್ಪಷ್ಟ ನಿರ್ದೇಶನ ಈಗಾಗಲೇ ನೀಡಲಾಗಿದೆ, ರೈತರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಂಡು ಪರಿಹಾರದ ಪ್ರಯೋಜನ ಪಡೆಯಿರಿ ಎಂದು ಬೋಪಯ್ಯ ಹೇಳಿದರು.

ಅಧ್ಯಕ್ಷತೆ ವಹಿಸಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅರುಣ್ ಅಪ್ಪಣ್ಣ ಮಾತನಾಡಿದರು. ಪಕ್ಷದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪಕ್ಷದ ಕಾರ್ಯಕರ್ತರ ಶ್ರಮ, ಪಂಚಾಯಿತಿ ಜನ ಪ್ರತಿನಿಧಿಗಳ ಸಹಕಾರದಿಂದ ಈ ಭಾರಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವುದಾಗಿ ಭರವಸೆ ನೀಡಿದರು. ವೇದಿಕೆಯಲ್ಲಿ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಉಪಾಧ್ಯಕ್ಷರಾದ ಚೋಡುಮಾಡ ಶ್ಯಾಮ್ ಪೂಣಚ್ಚ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಂಞAಗಡ ಅರುಣ್ ಭೀಮಯ್ಯ, ಖಜಾಂಚಿ ಚೆಪ್ಪುಡೀರ ಮಾಚು, ಸೇರಿದಂತೆ ಹಿರಿಯರಾದ ಚಕ್ಕೆರ ಕಾಳಯ್ಯ, ಅಳಮೇಂಗಡ ಮುದ್ದಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಜಿಲ್ಲಾ ಸಮಿತಿ ಸದಸ್ಯರಾದ ಮಂಡೆಚAಡ ದಿನೇಶ್ ಚಿಟ್ಯಪ್ಪ ನಿರೂಪಿಸಿ, ಸ್ವಾಗತಿಸಿದರು ಶಕ್ತಿ ಕೇಂದ್ರ ಪ್ರಮುಖ್ ಬೊಜ್ಜಂಗಡ ಸುನೀಲ್ ವಂದಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಪಕ್ಷದ ನಾಯಕರು ಉಪಸ್ಥಿತರಿದ್ದರು.