ಸೋಮವಾರಪೇಟೆ, ಜ. ೨೬: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಗೋವಿಂದರಾಜು ಅವರು ರಾಷ್ಟç ಧ್ವಜಾರೋಹಣ ಮಾಡಿದರು. ನಂತರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಸಮಿತಿ ಸದಸ್ಯರು ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.