ರಾಜಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟçಪತಿ ಕೋವಿಂದ್
ನವದೆಹಲಿ, ಜ. ೨೬: ರಾಷ್ಟç ರಾಜಧಾನಿ ದೆಹಲಿಯಲ್ಲಿ ರಾಷ್ಟçಪತಿ ರಾಮನಾಥ್ ಕೋವಿಂದ್ ೭೩ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ರಾಷ್ಟçಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಥ್ ನೀಡಿದರು. ಧ್ವಜಾರೋಹಣದ ಬಳಿಕ ರಾಷ್ಟçಪತಿಗಳು ಗೌರವ ವಂದನೆ ಸ್ವೀಕರಿಸಿ ಅಶೋಕ ಚಕ್ರ ಪ್ರದಾನ ಮಾಡಿದ್ದಾರೆ. ೯ ಉಗ್ರರನ್ನು ಹೊಡೆದುರುಳಿಸಿದ್ದ ಜಮ್ಮು-ಕಾಶ್ಮೀರದ ಹುತಾತ್ಮ ಎಎಸ್‌ಐ ಬಾಬು ರಾಮ್ ಅವರ ಕುಟುಂಬ ಸದಸ್ಯರು ಅಶೋಕ ಚಕ್ರ ಪದಕವನ್ನು ಸ್ವೀಕರಿಸಿದರು. ಬಳಿಕ ರಾಜ್‌ಪಥ್‌ನಲ್ಲಿ ಪರೇಡ್ ಪ್ರಾರಂಭವಾಯಿತು. ಧ್ವಜಾರೋಹಣಕ್ಕೂ ಮುನ್ನ ರಾಷ್ಟಿçÃಯ ಯುದ್ಧ ಸ್ಮಾರಕಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದ್ದರು.
ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ
ಬೆAಗಳೂರು, ಜ. ೨೬: ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟç ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟç ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು ಎಂದರು. ದೇಶ ಕಟ್ಟಲು ನಮ್ಮನ್ನು ಸಮರ್ಪಿಸಿಕೊಳ್ಳುವ ದಿನ. ಕರ್ನಾಟಕ ಭಾರತ ಒಕ್ಕೂಟದಲ್ಲಿ ಪ್ರಬಲವಾದ ರಾಜ್ಯ. ಇದು ಆರ್ಥಿಕವಾಗಿ, ಸಾಮಾಜಿಕವಾಗಿ, ಕೌಶಲ್ಯಯುತವಾಗಿ, ಸಾಂಸ್ಕೃತಿಕವಾಗಿ ಕೊಡುಗೆ ನೀಡುವ ರಾಜ್ಯ. ಈ ಪರಂಪರೆಯನ್ನು ನಾವು ಉಳಿಸಿ ಬೆಳಸಬೇಕಿದೆ. ಇನ್ನಷ್ಟು ಉನ್ನತಮಟ್ಟಕ್ಕೆ ನಮ್ಮ ಪರಂಪರೆಯನ್ನು ಕೊಂಡೊಯ್ಯಬೇಕಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಚಿಂತನೆ ಹಾಗೂ ಕರ್ತವ್ಯವಿರಬೇಕು ಎಂದು ಜಾಗೃತಿ ಮೂಡಿಸುವ ದಿನ ಇದು ಎಂದರು.
ರೈಲ್ವೆ ಉದ್ಯೋಗಕ್ಕಾಗಿ ಪ್ರತಿಭಟನೆ; ರೈಲಿಗೆ ಬೆಂಕಿ
ಪಾಟ್ನಾ, ಜ. ೨೬: ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ (ಎನ್‌ಟಿಪಿಸಿ) ರೈಲ್ವೆ ನೇಮಕಾತಿ ಮಂಡಳಿಯ ಎರಡು ಹಂತದ ಪರೀಕ್ಷೆಯ ವಿರುದ್ಧ ಮತ್ತು ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಕಳೆದ ಮೂರು ದಿನಗಳಿಂದ ಆಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಬುಧವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ವರ್ತಿಸುವಂತೆ ವಿನಂತಿಸಿಕೊAಡಿದ್ದಾರೆ. ಹಿಂಸಾಚಾರದಲ್ಲಿ ಪಾಲ್ಗೊಳ್ಳದಂತೆ ಕೇಂದ್ರ ಸಚಿವರು ಆಕಾಂಕ್ಷಿಗಳಿಗೆ ಮನವಿ ಮಾಡಿದ್ದು, ವಿದ್ಯಾರ್ಥಿಗಳೇ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ, ದಯವಿಟ್ಟು ಅದನ್ನು ನಾಶಪಡಿಸಬೇಡಿ. ನಿಮ್ಮ ಸಮಸ್ಯೆಗಳನ್ನು ನಾವು ಪರಿಹರಿಸುತ್ತೇವೆ. ಪರೀಕ್ಷೆಗಳ ಫಲಿತಾಂಶ ಪಾರದರ್ಶಕ ಮತ್ತು ನ್ಯಾಯೋಚಿತವಾಗಿರುತ್ತದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. ಬಿಹಾರದ ಗಯಾ ರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರ ಗುಂಪೊAದು ಕಲ್ಲು ತೂರಾಟ ನಡೆಸಿ, ರೈಲಿಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದು, ವಿವಿಧ ರೈಲ್ವೆ ನೇಮಕಾತಿ ಮಂಡಳಿಗಳ ಅಡಿಯಲ್ಲಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ಅನುತ್ತೀರ್ಣರಾದವರ ಕುಂದುಕೊರತೆಗಳನ್ನು ಪರಿಶೀಲಿಸಲು ಸಚಿವಾಲಯ ಸಮಿತಿಯೊಂದನ್ನು ರಚಿಸಿದೆ. ಸಮಿತಿಯು ಮಾರ್ಚ್ ೪ ರೊಳಗೆ ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನಾಕಾರರು ಆರಂಭದಲ್ಲಿ ರೈಲಿಗೆ ಕಲ್ಲು ತೂರಾಟ ನಡೆಸಿ ನಂತರ ಕೋಚ್‌ಗೆ ಬೆಂಕಿ ಹಚ್ಚಿದರು ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆದಿತ್ಯ ಕುಮಾರ್ ಅವರು ಹೇಳಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ
ನವದೆಹಲಿ, ಜ. ೨೬: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ೧೭ ವರ್ಷದ ಅಪ್ರಾಪ್ತ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಚೀನಾ ಕೂಡ ಕಾಣೆಯಾಗಿದ್ದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ನಿವಾಸಿಯಾಗಿರುವ ಮಿರಾಮ್ ಟ್ಯಾರೋನ್ ಎಂಬ ಅಪ್ರಾಪ್ತ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗಿದೆ ಎಂದು ಸಚಿವ ಕಿರಣ್ ರಿಜಿಜು ಹೇಳಿದರು. ಭಾರತೀಯ ಸೇನೆಯು ಗಣರಾಜ್ಯೋತ್ಸವ ದಿನದಂದು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗೆ ಹಾಟ್‌ಲೈನ್ ಮೂಲಕ ಭಾರತದ ಅಪ್ರಾಪ್ತ ಯುವಕನನ್ನು ಹಸ್ತಾಂತರಿಸುವುದಾಗಿ ಪ್ರತಿಕ್ರಿಯಿಸಿದೆ ಮತ್ತು ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಅವರು ಶೀಘ್ರದಲ್ಲೇ ದಿನಾಂಕ ಮತ್ತು ಸಮಯವನ್ನು ತಿಳಿಸುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗಿದೆ ಎಂದು ಕಿರಣ್ ರಿಜಿಜು ವಿವರಿಸಿದರು.
ರಫೇಲ್ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್
ನವದೆಹಲಿ, ಜ. ೨೬: ದೆಹಲಿಯ ರಾಜ್‌ಪಥದಲ್ಲಿ ನಡೆದ ೭೩ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದೇಶದ ಮೊದಲ ಮಹಿಳಾ ರಫೇಲ್ ಫೈಟರ್ ಜೆಟ್ ಪೈಲಟ್ ಶಿವಾಂಗಿ ಸಿಂಗ್ ಭಾರತೀಯ ವಾಯುಪಡೆಯ (ಐಎಎಫ್) ಟ್ಯಾಬ್ಲೋದಲ್ಲಿ ಭಾಗವಹಿಸಿ ಎಲ್ಲರ ಗಮನಸೆಳೆದರು. ಐಎಎಫ್ ಟ್ಯಾಬ್ಲೋದಲ್ಲಿ ಭಾಗವಹಿಸಿದ ಎರಡನೇ ಮಹಿಳಾ ಫೈಟರ್ ಜೆಟ್ ಪೈಲಟ್ ಎಂಬ ಖ್ಯಾತಿಗೆ ಒಳಗಾಗಿದ್ದಾರೆ. ಭವಿಷ್ಯಕ್ಕಾಗಿ ಭಾರತೀಯ ವಾಯುಪಡೆ ರೂಪಾಂತರಗೊಳ್ಳುತ್ತಿದೆ ಎಂಬ ಐಎಎಫ್ ಟ್ಯಾಬ್ಲೋ ಥೀಮ್ನಲ್ಲಿ ಸೆಲ್ಯೂಟ್ ಹೊಡೆದು ನಿಂತ ಶಿವಾಂಗಿ ನೆರೆದಿದ್ದ ಎಲ್ಲ ಗಣ್ಯರಿಗೆ ಗೌರವ ಸೂಚಿಸಿದರು. ಕಳೆದ ವರ್ಷ, ಫ್ಲೆöÊಟ್ ಲೆಫ್ಟಿನೆಂಟ್ ಭಾವನಾ ಕಾಂತ್ ಐಎಎಫ್ ಟ್ಯಾಬ್ಲೋದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಮೊದಲ ಮಹಿಳಾ ಫೈಟರ್ ಜೆಟ್ ಪೈಲಟ್ ಎಂಬ ಖ್ಯಾತಿ ಪಡೆದುಕೊಂಡಿದ್ದರು.
ಶ್ರೀನಗರದ ಲಾಲ್‌ಚೌಕ್ ಗಡಿಯಾರ ಗೋಪುರ ಮೇಲೆ ತ್ರಿವರ್ಣಧ್ವಜ!
ಶ್ರೀನಗರ, ಜ. ೨೬: ೭೩ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್‌ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು. ಭಾರತದ ಸ್ವಾತಂತ್ರ‍್ಯದ ನಂತರ ಗಡಿಯಾರ ಗೋಪುರದ ಮೇಲೆ ರಾಷ್ಟçಧ್ವಜವನ್ನು ಹಾರಿಸಿರುವುದು ಇದೇ ಮೊದಲು. ಭಾರತದ ೭೩ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಥಳೀಯ ಕಾರ್ಯಕರ್ತರಾದ ಸಾಜಿದ್ ಯೂಸುಫ್ ಶಾ ಮತ್ತು ಸಾಹಿಲ್ ಬಶೀರ್ ಅವರು ಸ್ಥಳೀಯರು ಎನ್‌ಜಿಒ ಮತ್ತು ಆಡಳಿತದೊಂದಿಗೆ ಲಾಲ್‌ಚೌಕ್ ಪ್ರದೇಶದಲ್ಲಿ ಗಡಿಯಾರ ಗೋಪುರದ ಮೇಲೆ ಕ್ರೇನ್ ಮೂಲಕ ಧ್ವಜಾರೋಹಣ ನೆರವೇರಿಸಿದರು. ‘ಸ್ವಾತಂತ್ರ‍್ಯದ ನಂತರ, ಗಡಿಯಾರ ಗೋಪುರದ ಮೇಲೆ ಕಣಿವೆಯಲ್ಲಿ ಶಾಂತಿಯನ್ನು ಕದಡಲು ಬಯಸಿದ ಪಾಕಿಸ್ತಾನಿ ಪ್ರಾಯೋಜಿತ ಘಟಕಗಳು ಪಾಕಿಸ್ತಾನದ ಧ್ವಜ ಹಾರಿಸುವುದನ್ನು ಮಾತ್ರ ನೋಡಿದ್ದೇವೆ. ಆರ್ಟಿಕಲ್ ೩೭೦ ರದ್ದಾದ ನಂತರ ನಮ್ಮ ರಾಷ್ಟçದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವುದನ್ನು ನಾವು ಗಮನಿಸಬಹುದು. ನಯಾ ಕಾಶ್ಮೀರ ಎಂದರೆ ಏನು ಎಂದು ಜನ ಕೇಳುತ್ತಿದ್ದರು. ಇಂದು ಗಡಿಯಾರ ಗೋಪುರದ ಮೇಲೆ ರಾಷ್ಟçಧ್ವಜವನ್ನು ಹಾರಿಸುವುದೇ ನಯಾ ಕಾಶ್ಮೀರವಾಗಿದೆ ಎಂದು ನಾನು ಹೇಳುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಜನತೆ ಬಯಸಿದ್ದು ಇದನ್ನೇ. ನಮಗೆ ಯಾವುದೇ ಪಾಕಿಸ್ತಾನಿ ಧ್ವಜಗಳು ಬೇಡ, ನಮಗೆ ಶಾಂತಿ ಮತ್ತು ಅಭಿವೃದ್ಧಿ ಬೇಕು ಎಂದು ಧ್ವಜಾರೋಹಣ ನೆರವೇರಿಸಿದ ಸಾಮಾಜಿಕ ಕಾರ್ಯಕರ್ತ ಸಾಹಿಲ್ ಬಶೀರ್ ಹೇಳಿದರು. ಲಾಲ್‌ಚೌಕ್‌ನಲ್ಲಿರುವ ಗಡಿಯಾರ ಗೋಪುರವು ಯಾವಾಗಲೂ ಕಾಶ್ಮೀರದ ರಾಜಕೀಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ.