ಮಡಿಕೇರಿ, ಜ. ೨೬: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೧-೨೨ನೇ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ತಾ. ೨೮ ಮತ್ತು ೨೯ ರಂದು ಕ್ರೀಡಾ ತರಬೇತಿ ಶಿಬಿರ ನಡೆಯಲಿದೆ.

ಕ್ರೀಡಾ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಾ. ೨೮ ರಂದು ಬೆಳಿಗ್ಗೆ ೯ ಗಂಟೆಗೆ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಜಾತಿ ದೃಢೀಕರಣ ಪತ್ರದ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರ-೨, ಈ ದಾಖಲಾತಿಗಳೊಂದಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬಂದು ನೋಂದಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.