ಮಡಿಕೇರಿ, ಜ. ೨೬: ವಿವಿಧ ಬೇಡಿಕೆ ಈಡೇರಿಸು ವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು, ೨೦೦೮ ರಿಂದ ೨೦೧೩ರ ವರೆಗೆ ಇದ್ದ ಬಿಜೆಪಿ ಸರಕಾರದಲ್ಲಿ ಮಂಡಿಸಲಾದ ಎಲ್ಲಾ ಮುಂಗಡ ಪತ್ರಗಳಲ್ಲಿ ಕೊಡಗು ಜಿಲ್ಲೆಯಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಅದೇ ರೀತಿ ೨೦೨೨-೨೩ನೇ

ಸಾಲಿನ ಮುಂಗಡ ಪತ್ರದಲ್ಲಿ ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗಾಗಿ ಕನಿಷ್ಟ ೧೦೦ ಕೋಟಿ ರೂಪಾಯಿ ಪ್ಯಾಕೇಜ್ ಮೀಸಲಿಡಬೇಕು, ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು, ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಹಾಗೂ ನೂತನವಾಗಿ ರಚನೆಗೊಂಡ ಪೊನ್ನಂಪೇಟೆ ತಾಲೂಕಿಗೆ ಮಿನಿವಿಧಾನಸೌಧ ನಿರ್ಮಾಣ ಮಾಡಲು ರೂ. ೧೦ ಕೋಟಿ ಮೀಸಲಿಡಬೇಕೆಂದು ಕೋರಿದ್ದಾರೆ.

೨೦೨೨-೨೩ನೇ ಸಾಲಿನ ಬಜೆಟ್‌ನಲ್ಲಿ ಈ ಎಲ್ಲಾ ಮನವಿಗೆ ಒತ್ತು ಕೊಟ್ಟು ಘೋಷಣೆ ಮಾಡಬೇಕೆಂದು ಪತ್ರದಲ್ಲಿ ಕೆ.ಜಿ. ಬೋಪಯ್ಯ ಉಲ್ಲೇಖಿಸಿದ್ದಾರೆ.