ನಾಪೋಕ್ಲು, ಜ. ೨೬: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ೧೧೨ ತುರ್ತು ಸ್ಪಂದನ ಸಹಾಯ ವ್ಯ
ವಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಧನಂಜಯ ತುರ್ತು ಸ್ಪಂದನ ವ್ಯವಸ್ಥೆಯ ಅವಶ್ಯಕತೆ ಹಾಗೂ ಉಪಯೋಗಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಉಪನ್ಯಾಸಕ ವೃಂದ, ಪೊಲೀಸ್ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.