ಶನಿವಾರಸಂತೆ, ಜ. ೨೭ : ಶನಿವಾರಸಂತೆ ಹೋಬಳಿ ಮಟ್ಟದ ಡಾ. ಅಂಬೇಡ್ಕರ್ ಭವನ ನಿರ್ಮಾಣ ಕಟ್ಟಡಕ್ಕೆ ತಾ. ೨೯ರಂದು ಬೆಳಿಗ್ಗೆ ೧೨ ಗಂಟೆಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಉಪಸ್ಥಿತರಿರುವರು ಎಂದು ದಲಿತ ಸಂಘರ್ಷ ಸಮಿತಿ ಜಂಟಿ ವೇದಿಕೆ ಒಕ್ಕೂಟದ ಅಧ್ಯಕ್ಷ ಜೆ.ಆರ್. ಪಾಲಾಕ್ಷ ತಿಳಿಸಿದ್ದಾರೆ.