ಮಡಿಕೇರಿ: ಜನರಿಗೆ ಬದ್ಧರಾಗಿ ಸರ್ಕಾರಗಳು ನಡೆದುಕೊಳ್ಳಬೇಕೆಂದು ಸಾರುವ ಸಂವಿಧಾನವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಬ್ದಾರಿ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಡಾ. ಶಹಬರ್ ಪಾಷಾ ಹೇಳಿದರು. ಗಣರಾಜ್ಯೋತ್ಸವದ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಧ್ವಜಾರೋಹಣದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನ ವ್ಯವಸ್ಥೆ ಇಲ್ಲದಿದ್ದರೆ ಏನಾಗುತ್ತದೆ ಎಂಬುದನ್ನು ಅರಿಯಲು ಸ್ವಾತಂತ್ರö್ಯ ಪೂರ್ವ ವ್ಯವಸ್ಥೆಯನ್ನು ಗಮನಿಸಿದರೆ ನಮಗೆ ಸಂವಿಧಾನದ ಪ್ರಾಮುಖ್ಯತೆ ಏನು ಎಂದು ಮನದಟ್ಟಾಗುತ್ತದೆ ಎಂದು ಹೇಳಿದ ಅವರು, ಸಂವಿಧಾನಾತ್ಮಕತೆಯ ಕೊರತೆಯಿಂದಾಗಿ ಇಂದು ಹಲವಾರು ದೇಶಗಳಲ್ಲಿ ಅರಾಜಕತೆ ಉಂಟಾಗಿರುವುದನ್ನು ನಾವು ದೈನಂದಿನ ಪತ್ರಿಕೆಗಳಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸುಂಟಿಕೊಪ್ಪದ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಸಂವಿಧಾನ ರಚನೆಯ ಎಲ್ಲಾ ಬೆಳವಣಿಗೆಗಳನ್ನು ವಿವರಿಸಿ ಸಂವಿಧಾನದ ಮಹತ್ವವನ್ನು ಅದರ ವಿಧಿ ವಿಧಾನಗಳನ್ನು ಮಂಡಿಸಿದರು. ಧ್ವಜಾರೋಹಣ ನೆರವೇರಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸಿ. ಜಗತ್ ತಿಮ್ಮಯ್ಯ, ನಮ್ಮ ದೇಶದ ಬಗ್ಗೆ ಬೇರೆ ಜನರು ಬೇರೆ ಬೇರೆ ರೀತಿಯಲ್ಲಿ ವಿಶ್ಲೇಷಿಸಿದರೂ ಕೂಡ, ಏನೇ ಲೋಪದೋಷಗಳಿದ್ದರೂ ಅವುಗಳನ್ನು ಸರಿಪಡಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ವಿದ್ಯಾರ್ಥಿ ಶ್ರೇಯೋಭಿವೃದ್ಧಿ ಸಂಯೋಜಕರು ಹಾಗೂ ಹಿಂದಿ ಉಪನ್ಯಾಸಕ ಡಾ. ತಲವಾರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್ಸಿಸಿ ಸೀನಿಯರ್ ಅಂಡರ್ ಆಫೀಸರ್ ಭೂಮಿಕ ಕಾರ್ಯಕ್ರಮ ನಿರೂಪಿಸಿದರು. ಇಂಗ್ಲೀಷ್ ಉಪನ್ಯಾಸಕ ಅಲೋಕ್ ಬಿಜೈ ವಂದಿಸಿದರು. ಕಾರ್ಯಕ್ರಮದಲ್ಲಿ ಎನ್ಸಿಸಿ ಅಧಿಕಾರಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಮೇಜರ್ ಡಾ. ರಾಘವ ಬಿ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ರವಿಶಂಕರ್, ಕನ್ನಡ ಉಪನ್ಯಾಸಕ ರಾಜೀವ ಪೆರ್ಲ, ಸೂಕ್ಮಾಣು ಜೀವಶಾಸ್ತç ವಿಭಾಗದ ಉಪನ್ಯಾಸಕಿ ಡಾ. ಸೌಮ್ಯ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥೆ ಡಾ. ರೇಣುಶ್ರಿ, ಸಮಾಜಶಾಸ್ತç ವಿಭಾಗದ ಉಪನ್ಯಾಸಕಿ ಡಾ. ಗಾಯತ್ರಿ, ರಾಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್, ಎನ್ಎಸ್ಎಸ್, ಎನ್ಸಿಸಿ ಹಾಗೂ ಇಸಿಸಿ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.ವೀರಾಜಪೇಟೆ: ಇಲ್ಲಿಗೆ ಸಮೀಪದ ಕಲ್ಲುಬಾಣೆಯ ಬದ್ರಿಯಾ ಶಾಲೆಯಲ್ಲಿ ಎಸ್ಕೆಎಸ್ಬಿವಿ ವತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಮಾಜಿ ಯೋಧ ಹಾಗೂ ಬಿಜು ಜೋಸ್ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಮಾತನಾಡಿದ ಬಿಜು ಜೋಸೆಫ್, ದೇಶಕ್ಕೆ ಹೆಚ್ಚು ಸೈನಿಕರನ್ನು ನೀಡಿದ ಕೀರ್ತಿ ಕೊಡಗಿನದು, ಆದರೆ ಇತ್ತೀಚಿನ ವರ್ಷಗಳಲ್ಲಿ ಸೈನ್ಯಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದಿಸಿದರು.
ಕಲ್ಲುಬಾಣೆ ಮದರಸದ ಪ್ರಾಂಶುಪಾಲ ಹನೀಫ್ ಫೈಸಿ, ಸಿದ್ದಿಕ್ ಫೈಸಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಕೆ. ಅಶ್ರಫ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಟಿ. ಬಶೀರ್, ಸಹದೀರ್ ಅಲಿ, ಸಿದ್ದಿಕ್ ಪೈಸಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು. ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.ಗೋಣಿಕೊಪ್ಪ ವರದಿ: ಸಂವಿಧಾನದ ಕಾನೂನು ಕಟ್ಟಳೆಗಳ ಅಡಿಯಲ್ಲಿ ಎಲ್ಲರೂ ಉತ್ತಮ ಬಾಳು ಕಾಣುವಂತಾಗಬೇಕು ಎಂದು ಪೊನ್ನಂಪೇಟೆ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಗಿರಿಗೌಡ ಹೇಳಿದರು.
ಪೊನ್ನಂಪೇಟೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು, ವಕೀಲರು, ನ್ಯಾಯಾಲಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು. ಎಲ್ಲರೂ ಒಂದಾಗಿ ಸಹಭಾಳ್ವೆ ಕಾಣಲು ಸಂವಿಧಾನಕ್ಕೆ ಗೌರವ ಕೊಡುವಂತಾಗಬೇಕು ಎಂದರು.
ಪೊನ್ನAಪೇಟೆ ವಕೀಲರ ಸಂಘದ ಅಧ್ಯಕ್ಷ ಕಳಕಂಡ ಡಿ. ಮುತ್ತಪ್ಪ ಮಾತನಾಡಿ, ಕಾನೂನು ಪಾಲನೆಯ ಜವಬ್ದಾರಿ ಎಲ್ಲರ ಮೇಲಿದೆ. ಇದು ಸಂವಿಧಾನಕ್ಕೆ ನೀಡುವ ಗೌರವ ಎಂದು ಭಾವಿಸಬೇಕು ಎಂದರು. ಪೊನ್ನಂಪೇಟೆ ಪೊಲೀಸ್ ಉಪ ನಿರೀಕ್ಷಕ ಕುಮಾರ್, ಸರ್ಕಾರಿ ಅಭಿಯೋಜಕ ಅಮೃತ್, ಅಪರ ಸರ್ಕಾರಿ ವಕೀಲೆ ಕಂಜಿತAಡ ಅನಿತ, ವಕೀಲರ ಸಂಘದ ಕಾರ್ಯದರ್ಶಿ ಅಜ್ಜಮಾಡ ಮೋನಿ ಪೊನ್ನಪ್ಪ ಇದ್ದರು.ಕರಡ: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಬೇಪಡಿಯಂಡ ವಿಲೀನ್ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಹೆಚ್.ಎಂ. ಲೋಕೇಶ್ ವಹಿಸಿದ್ದರು. ಸಮಾರಂಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯೆ ಎಂ.ವಿ. ನೇತ್ರಾವತಿ ಆಗಮಿಸಿದ್ದರು. ದೀಪಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿಗಳು ದಿನದ ಮಹತ್ವ ಕುರಿತು ಭಾಷಣ ಮಾಡಿದರು. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ ಡಿ.ಕೆ. ಸ್ವಾಗತಿಸಿ, ವಂದಿಸಿದರು.ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಪರಮೇಶ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಸ್ವಾಗತಿಸಿದರು. ಶಾಲಾ ಮಕ್ಕಳಿಂದ ವಿವಿಧ ಮನರಂಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಬಿ.ಎನ್. ಕಾಶಿ ಮತ್ತು ಮಾಜಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ಮುಂತಾದವರು ಹಾಜರಿದ್ದರು.ಸಿದ್ದಾಪುರ: ಇಲ್ಲಿನ ಮುನವ್ವಿರುಲ್ ಇಸ್ಲಾಂ ಮದ್ರಸ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿದ್ದಾಪುರ ಮುಸ್ಲಿಂ ಜಮಾಅತ್ ಸಮಿತಿ ಅಧ್ಯಕ್ಷ ಮುಸ್ತಫಾ ಹಾಜಿ ಧ್ವಜಾರೋಹಣ ನೆರವೇರಿಸಿದರು.
ಮದರಸಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಸೀದಿಯ ಖತೀಬ್ ನೌಫಲ್ ಹುದವಿ ಮಾತನಾಡಿ, ಜಾತ್ಯತೀತ ದೇಶದಲ್ಲಿ ರೂಪಿತವಾದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದರು.
ಈ ಸಂದರ್ಭ ಮುಸ್ಲಿಂ ಜಮಾಅತ್ ಸಮಿತಿಯ ಪ್ರಮುಖರಾದ ರವೂಫ್ ಹಾಜಿ, ಅಸ್ಕರ್, ಮಜೀದ್, ಸಿ.ಎಂ. ಕರೀಂ, ಸಮೀರ್, ಮದರಸಾ ಮುಖ್ಯ ಶಿಕ್ಷಕ ಆರಿಫ್ ಫೈಝಿ, ಶಿಕ್ಷಕರುಗಳಾದ ಮೊಹಿದೀನ್ ಮುಸ್ಲಿಯಾರ್, ಹನೀಫ್ ಮುಸ್ಲಿಯಾರ್, ಅಬೂಬಕ್ಕರ್ ಸಿದ್ದಿಕ್, ಯೂಸುಫ್ ಮುಸ್ಲಿಯಾರ್, ಕರೀಂ ಮುಸ್ಲಿಯಾರ್, ಸುಲೈಮಾನ್, ಎಸ್ಕೆಎಸ್ ಬಿವಿ ಸಂಘಟನೆ ಅಧ್ಯಕ್ಷ ಅಮನ್, ಎಸ್ಕೆಎಸ್ಎಸ್ಎಫ್ ವಲಯಾಧ್ಯಕ್ಷ ಸರ್ಫುದ್ದೀನ್ ಮತ್ತಿತರರು ಹಾಜರಿದ್ದರು.ಮಡಿಕೇರಿ: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಮಡಿಕೇರಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಧ್ವಜಾರೋಹಣ ನೆರವೇರಿಸಿದರು.
ಸಂಘದ ಉಪಾಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ, ಕಾರ್ಯದರ್ಶಿ ಕೊಟ್ಟಕೇರಿಯನ ಡಿ. ದಯಾನಂದ, ಸದಸ್ಯರಾದ ಬಂಗಾರಕೋಡಿ ಉದಯಕುಮಾರ್ ಮತ್ತು ಇತರ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಠಾಣಾಧಿಕಾರಿ ಡಿ. ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಠಾಣೆಯ ತನಿಖೆ ಸಹಾಯಕರಾಗಿ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಬಾಕಿ ಉಳಿದಿದ್ದ ೫೮ ಪ್ರಕರಣಗಳನ್ನು ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಿದ ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಹಾಯಕ ಠಾಣಾಧಿಕಾರಿಗಳಾದ ಸುಂದರೇಶ್ ಹಾಗೂ ವೆಂಕಟೇಶ್, ಸಿಬ್ಬಂದಿ ಮಹದೇಶ್ವರ ಸ್ವಾಮಿ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.ಮಡಿಕೇರಿ: ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಕೋಶಾಧಿಕಾರಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಟ್ರಸ್ಟಿ ಶ್ರೀಧರ್ ಹೂವಳ್ಳಿ, ವರ್ತಕರುಗಳಾದ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಕಾರು ಚಾಲಕರ ಸಂಘದ ಪದಾಧಿಕಾರಿ ದಿನೇಶ್, ಪತ್ರಿಕಾ ಭವನದ ಸಿಬ್ಬಂದಿಗಳಾದ ಯಮುನ. ಕೆ.ಪಿ., ಸವಿತಾ ಅನಿಲ್, ರಾಜೇಶ್ ಬಿ.ಪಿ. ಮತ್ತಿತರರಿದ್ದರು.ಮಡಿಕೇರಿ: ಸೋಶಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪಕ್ಷದ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಮುಸ್ತಫ ಮಡಿಕೇರಿ ಧ್ವಜಾರೋಹಣ ನೆರವೇರಿಸಿದರು.
ಮಡಿಕೇರಿ ನಗರ ಸಮಿತಿ ಉಸ್ತುವಾರಿ ಶಮೀರ್ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಕಾರ್ಯದರ್ಶಿ ಬಶೀರ್ ಅಹಮದ್, ಪಿಎಫ್ಐ ಜಿಲ್ಲಾಧ್ಯಕ್ಷ ಶೌಕತ್ ಅಲಿ, ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷೆ ಮೇರಿ ವೇಗಸ್, ಕೋಶಾಧಿಕಾರಿ ಸಂಶೀರ್ ನೆಲ್ಲಿಹುದಿಕೇರಿ, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕಾರ್, ಮಡಿಕೇರಿ ನಗರಸಭಾ ಸದಸ್ಯರಾದ ಅಮೀನ್ ಮೊಹಿಸಿನ್, ನೀಮಾ ಅರ್ಷಾದ್ ಉಪಸ್ಥಿತರಿದ್ದರು. ರಿಯಾಝ್ ಅಹಮದ್ ನಿರೂಪಿಸಿ, ಉಬೈದ್ ವಂದಿಸಿದರು.ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಗಣರಾಜ್ಯೋತ್ಸವ ಒಂದು ಪ್ರಮುಖ ದಿನವಾಗಿದ್ದು, ಇಡೀ ದೇಶವೇ ಸಂಭ್ರಮಿಸುವ ದಿನ ಎಂದರು. ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪ್ರೊ. ಕೆ.ಈ. ರಾಧಾಕೃಷ್ಣ, ಕೆಪಿಸಿಸಿ ವಕ್ತಾರ ಟಿ.ಪಿ. ರಮೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಪದಾಧಿಕಾರಿಗಳಾದ ಚುಮ್ಮಿ ದೇವಯ್ಯ, ಪುಷ್ಪ ಪೂಣಚ್ಚ, ಸಂದೀಪ್ ಮುಕ್ಕಾಟಿರ, ಜುಲೇಕಾಬಿ, ಕಾಂಗ್ರೆಸ್ ಮಾಧ್ಯಮ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಆರ್.ಪಿ. ಚಂದ್ರಶೇಖರ್, ಮಡಿಕೇರಿ ಬ್ಲಾಕ್ ಅಧ್ಯಕ್ಷÀ ಹಂಸ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಎಲ್ಲಪ್ಪ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕಲೀಲ್ ಭಾಷ, ನಗರಾಧ್ಯಕ್ಷ ಕೆ.ಜಿ. ಪೀಟರ್, ಎಸ್.ಸಿ. ಘಟಕದ ಅಧ್ಯಕ್ಷ ಮುದ್ದುರಾಜ್, ಸಾಮಾಜಿಕ ಜಾಲತಾಣದ ಬ್ಲಾಕ್ ಅಧ್ಯಕ್ಷ ತಾಹ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಕಸಾಪ ಜಿಲ್ಲಾ ಕೋಶಾಧಿಕಾರಿ ಎಸ್.ಡಿ. ವಿಜೇತ್ ಧ್ವಜಾರೋಹಣ ಮಾಡಿದರು. ಜೈಜವಾನ್ ಮಾಜಿ ಸೈನಿಕರ ಸಂಘದಿAದ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಈರಪ್ಪ ಧ್ವಜಾರೋಹಣ ನೆರವೇರಿಸಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆಟೋ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ಗಂಗಾಧರ್, ಜಂಟಿ ಕಾರ್ಯದರ್ಶಿ ಜನಾರ್ಧನ್, ಮೋಟಾರ್ ಯೂನಿಯನ್ ಅಧ್ಯಕ್ಷ ಕೆ.ಜಿ. ಸುರೇಶ್, ಉಪಾಧ್ಯಕ್ಷ ಬಾಲಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇಲ್ಲಿನ ವಿಎಸ್ಎಸ್ಎನ್ ಹಾಗೂ ಕಾಫಿ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಹೆಚ್.ಕೆ. ಮಾದಪ್ಪ ಧ್ವಜಾರೋಹಣ ಮಾಡಿದರು. ನಿರ್ದೇಶಕರುಗಳು, ಕಾಫಿ ಮಂಡಳಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯಿತಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪಂಚಾಯಿತಿ ಸದಸ್ಯರುಗಳು, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.