ಸೋಮವಾರಪೇಟೆ, ಜ. ೨೭: ಇಲ್ಲಿನ ಸಂತಜೋಸೆಫರ ಪದವಿ ಕಾಲೇಜಿನಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಮಿತಿ ಉದ್ಘಾಟನೆ ಕಾರ್ಯಕ್ರಮ ಓ.ಎಲ್.ವಿ. ಚರ್ಚ್ ಆವರಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಾಲಕೃಷ್ಣ ರೈ ಅವರು ಮಾತನಾಡಿ, ಸರಕಾರವು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರಲ್ಲದೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕೆAದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಜೋಸೆಫರ ವಿದ್ಯಾಸಂಸ್ಥೆಗಳ ಸಂಚಾಲಕರಾದ ಎಂ.ರಾಯಪ್ಪ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲ ಪಿ.ಜೆ ಜಸ್ಟಿನ್, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಮಿತಿ ಸಂಯೋಜಕ ಶಿವಕುಮಾರ್ ಉಪಸ್ಥಿತರಿದ್ದರು.