ಸೋಮವಾರಪೇಟೆ, ಜ. ೨೭: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. ೯.೫೦ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೂಮಿಪೂಜೆ ನೆರವೇರಿಸಿದರು.

ತಾಲೂಕಿನ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೮೪.೪೧ ಲಕ್ಷ, ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೬೭.೫೦ ಲಕ್ಷ, ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೩.೩೭ ಕೋಟಿ, ಬೇಳೂರು ಗ್ರಾ.ಪಂ.ನಲ್ಲಿ ೧.೭೦ ಕೋಟಿ, ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ೯೮ ಲಕ್ಷ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೯೪ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭ ಸ್ಥಳೀಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಸದಸ್ಯರುಗಳು, ಜಿ.ಪಂ. ಇಂಜಿನಿಯರಿAಗ್ ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರರು ಉಪಸ್ಥಿತರಿದ್ದರು.