*ಗೋಣಿಕೊಪ್ಪ, ಜ. ೨೭: ಎಸ್.ಬಿ.ಐ ಬ್ಯಾಂಕ್ ಮುಂಭಾಗದಲ್ಲಿ ಪ್ರಯಾಣಿಕರ ಸೇವೆಗಾಗಿ ಆಟೋ ರಿಕ್ಷಾ ನಿಲ್ದಾಣವನ್ನು ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರ ಬಿ. ಚೇತನ್ ಉದ್ಘಾಟಿಸಿದರು.
ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣದ ಸ್ಥಳವನ್ನು ಪಂಚಾಯಿತಿ ವತಿಯಿಂದ ವಿಸ್ತರಿಸಿ ಆಟೋ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ಸದಸ್ಯ ಮಂಜುಳ, ಆಟೋ ಚಾಲಕರ ಸಂಘದ ಅಧ್ಯಕ್ಷ ಕುಲ್ಲಚಂಡ ಬೋಪಣ್ಣ, ಉಪಾಧ್ಯಕ್ಷ ಜಿಮ್ಮ ಸುಬ್ಬಯ್ಯ, ಸಂಘದ ಪದಾಧಿಕಾರಿಗಳು, ಆಟೋ ಚಾಲಕರು ಪಾಲ್ಗೊಂಡಿದ್ದರು.