ಮಡಿಕೇರಿ, ಜ.೨೮: ೨೦೨೨-೨೩ನೇ ಸಾಲಿನ ಮಡಿಕೇರಿ ನಗರಸಭೆ ಆಯವ್ಯಯ ತಯಾರಿಸುವ ಮುಂಚಿತವಾಗಿ ಈ ಸಾಲಿನ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆದು ಆಯವ್ಯಯ ತಯಾರಿಸಲು ಸಾರ್ವಜನಿಕ ಸಂಘ ಸಂಸ್ಥೆಗಳ ಎನ್‌ಜಿಒಗಳು ಮತ್ತು ಮಾಜಿ ನಗರಸಭಾ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳ ಸಭೆಯು ಫೆಬ್ರವರಿ ೧ ರಂದು ಮಧ್ಯಾಹ್ನ ೩.೩೦ ಗಂಟೆಗೆ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.