*ವೀರಾಜಪೇಟೆ, ಜ. ೨೭: ವೀರಾಜಪೇಟೆಯ ಮೀನುಪೇಟೆ ನಿವಾಸಿ ಅಚ್ಚಪಂಡ ತಮ್ಮಯ್ಯ (೯೪) ಎಂಬವರು ತಮ್ಮ ಮನೆಯ ಮುಂಭಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮಯ್ಯ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ಪೊಲೀಸ್ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವೀರಾಜಪೇಟೆ ನಗರ ಪೊಲೀಸ್ ಠಾಣಾಧಿಕಾರಿ ಜಗದೀಶ್ ದೂಳು ಶೆಟ್ಟಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.