ಮಡಿಕೇರಿ, ಜ. ೨೯: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯೆ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಅಲೆಮಾರಿ ಜನಾಂಗದವರಿಗೆ ಇಲಾಖೆಯಿಂದ ನೀಡಬಹುದಾದ ಸವಲತ್ತುಗಳನ್ನು ಉಪನ್ಯಾಸ ನೀಡುವುದರ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸಲಾಯಿತು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.