
ಮಡಿಕೇರಿ, ಜ. ೩೦: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆಯು ನಗರದಲ್ಲಿ ಭಾನುವಾರ ಜರುಗಿತು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ನೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಲತೋಪು ಹಾರಿಸುವ ಮೂಲಕ ರಾಷ್ಟçಪಿತಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು.
ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.
ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿ ಸಲಾಯಿತು.
ಮಾಜಿ ಸಚಿವರಾದ ಎಂ.ಸಿ. ನಾಣಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟ ಅಧ್ಯಕ್ಷರಾದ ಟಿ.ಪಿ.ರಮೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಸದಸ್ಯರುಗಳು ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಜಿಲ್ಲಾ ಖಜಾನಾಧಿಕಾರಿ (ಮೊದಲ ಪುಟದಿಂದ) ಪದ್ಮಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ತಹಶೀಲ್ದಾರ್ ಮಹೇಶ್, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪೊಲೀಸ್ ಇನ್ಸ್ಪೆಕ್ಟರ್ ವೆಂಕಟೇಶ್, ಮೇದಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದರ್ಶನ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸಿಕ್ವೇರಾ, ಮತ್ತಿತರರು ಇದ್ದರು.
ಬಳಿಕ ಮಾತನಾಡಿದ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಇರುವುದು ಇಡೀ ರಾಷ್ಟçದಲ್ಲೇ ವಿಶೇಷವಾಗಿದೆ. ಆ ದಿಸೆಯಲ್ಲಿ ನಗರದ ಗಾಂಧೀ ಮಂಟಪದಲ್ಲಿ ಚಿತಾಭಸ್ಮವಿಟ್ಟು ‘ರಾಜ್ಘಾಟ್’ ಮಾದರಿಯಲ್ಲಿ ‘ಗಾಂಧಿ ಸ್ಮಾರಕ ನಿರ್ಮಾಣ’ ಮಾಡುವಂತಾಗ ಬೇಕು ಎಂದು ಸಲಹೆ ನೀಡಿದರು.
ಈಗಾಗಲೇ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ‘ಗಾಂಧಿ ಭವನ’ ನಿರ್ಮಾಣ ಆಗುತ್ತಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಆ ದಿಸೆಯಲ್ಲಿ ಗಾಂಧಿ ಭವನದಲ್ಲಿ ಗಾಂಧೀಜಿ ವಿಚಾರಧಾರೆಗಳ ಕುರಿತು ಕಾರ್ಯಕ್ರಮಗಳು, ಗ್ರಂಥಾಲಯ ಮತ್ತಿತರ ಚಟುವಟಿಕೆಗಳು ಒಳಗೊಂಡಿರುತ್ತದೆ ಎಂದು ಮಾಜಿ ಸಚಿವರು ತಿಳಿಸಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಆಯೋಜಿಸಿಕೊಂಡು ಬರಲಾಗಿದೆ. ಆ ನಿಟ್ಟಿನಲ್ಲಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈಗಾಗಲೇ ನೀಲನಕ್ಷೆ ತಯಾರಿಸಲಾಗಿದೆ. ಜಾಗ ಸಂಬAಧ ಸರ್ವೆ ಕಾರ್ಯ ಆಗಿದೆ ಎಂದರು.
ಶಾಸಕರಾದ ಕೆ.ಜಿ. ಬೋಪಯ್ಯ ಅವರ ನೇತೃತ್ವದಲ್ಲಿ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ೧ ಕೋಟಿ ರೂ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದ್ದು, ಆ ಸಂದರ್ಭದಲ್ಲಿ ೫೦ ಲಕ್ಷ ರೂ ಬಿಡುಗಡೆಗೆ ಆದೇಶ ಮಾಡಿದ್ದರು, ಸದ್ಯ ಗಾಂಧಿ ಮಂಟಪದಲ್ಲಿನ ೩೫ ಸೆಂಟ್ಸ್ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಸ್ತಾಂತರವಾದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರನ್ನು ಭೇಟಿ, ಮಾಡಿ ಅನುದಾನ ಬಿಡುಗಡೆಗೆ ಕೋರಲಾಗುವುದು ಎಂದು ಟಿ.ಪಿ. ರಮೇಶ್ ತಿಳಿಸಿದರು.