ಮಡಿಕೇರಿ, ಜ. ೩೦: ಜಿಲ್ಲೆಯಲ್ಲಿ ತಾ. ೩೧ ಮತ್ತು ಫೆಬ್ರವರಿ ೧ ರಂದು ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಗರದ ಶ್ರೀನಿಕೇತನ, ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ಸಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಆದೇಶಿಸಿದ್ದಾರೆ.

ಹಾಗೆಯೇ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಸಹಾ ಆದೇಶಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.