ಕೂಡಿಗೆ, ಜ. ೩೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೧-೨೨ನೇ ಸಾಲಿನ ಮೊದಲನೆ ತ್ರೆöÊಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೊದಲಿಗೆ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ ರಾವ್, ಶಿವಕುಮಾರ್ ಸೇರಿದಂತೆ ಹಲವು ಸದಸ್ಯರು ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಶಾಲೆಗಳಿಗೆ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ೪ ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳ ನಿರ್ವಹಣೆ ಇಲ್ಲದೆ ಒಣಗುತ್ತಿರುವ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಂದಿಗೆ ಭಾರೀ ಚರ್ಚೆಗಳು ನಡೆದವು. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನವನ್ನು ಕ್ರಮಬದ್ಧವಾಗಿ ನಿರ್ವಹಣೆ ಮಾಡುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.

ಕೃಷಿ ಇಲಾಖೆಯ ವತಿಯಿಂದ ನಡೆಯುವ ಬೆಳೆ ಸಮೀಕ್ಷೆಯ ವರದಿಗಳ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ಬರುತ್ತಿಲ್ಲ. ಇದುವರೆಗೂ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾದ ಬೆಳೆ ಸಮೀಕ್ಷೆ ನಡೆದಿಲ್ಲ. ಸರಿಪಡಿಸುವಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಕುಶಾಲನಗರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರುಣ ಅವರು ಕೃಷಿ ಇಲಾಖೆಯ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಇದರ ಜೊತೆಯಲ್ಲಿ ಬೆಳೆ ಸಮೀಕ್ಷೆಯ ತೊಡಕುಗಳ ಬಗ್ಗೆ ಸಭೆಗೆ ತಿಳಿಸಿದರು. ರೈತರ ಆರ್‌ಟಿಸಿ ನೋಂದಣಿ ಅದಲು ಬದಲು ಬಗ್ಗೆ ಸರಕಾರದ ಮಾರ್ಗಸೂಚಿಯಂತೆ ಕಂದಾಯ ಇಲಾಖೆಯವರು ಸರಿಪಡಿಸಬೇಕು, ಅದರ ಅನ್ವಯ ಬೆಳೆ ಸಮೀಕ್ಷೆಯ ನೋಂದಣಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರೈತರಿಗೆ ವಿವಿಧ ಯೋಜನೆ ಅಡಿಯಲ್ಲಿ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡುವ ಬಗ್ಗೆ ಸಮರ್ಪಕ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ರೈತರು ರೇಷ್ಮೆ ಬೆಳೆಯ ನಾಟಿ ಮತ್ತು ಗೂಡು ಸಾಕಾಣಿಕೆ, ಮನೆಗಳ ನಿರ್ಮಾಣಕ್ಕೆ ಸಂಬAಧಿಸಿದAತೆ ರೇಷ್ಮೆ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು. ಜಲಜೀವನ್ ಯೋಜನೆ ಕುಡಿಯುವ ನೀರಿನ ಸರಬರಾಜು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಜಿಲ್ಲಾ ಪಂಚಾಯಿತಿ ಕಾಮಗಾರಿಗಳ ಬಗ್ಗೆ ಸವಿಸ್ತಾರವಾಗಿ ತಾಲೂಕು ಇಂಜಿನಿಯರ್ ಕಿರಣ್ ಅವರು ಮಾಹಿತಿ ನೀಡಿದರು. ವಿದ್ಯುತ್ ಇಲಾಖೆಯವರು ವಿದ್ಯುತ್ ಕಡಿತಗೊಳಿಸದೆ ರೈತರಿಗೆ ಸದುಪಯೋಗವಾಗುವ ರೀತಿಯಲ್ಲಿ ಕೊಳವೆ ಬಾವಿ ವಿದ್ಯುತ್ ಸೌಲಭ್ಯಗಳನ್ನು ಒದಗಿಸುವಂತೆ ಸಭೆಯಲ್ಲಿ ಆಗ್ರಹ ಕೇಳಿ ಬಂದಿತು.

ಸಭೆಯಲ್ಲಿ ಹಾಜರಿದ್ದ ಆಹಾರ ಇಲಾಖೆ, ಪಶುಪಾಲನಾ ಇಲಾಖೆ, ಆರೋಗ್ಯ ಶಿಕ್ಷಣ, ಕಂದಾಯ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಇಲಾಖೆಯ ಯೋಜನೆಯ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಆಶಾ ಕಾರ್ಯಕರ್ತೆರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ಅಭಿವೃದ್ಧಿ ಅಧಿಕಾರಿ ಎಂ.ಕೆ. ಆಯಿಷಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮತ್ತು ಸರಕಾರದ ಯೋಜನೆಯ ನಿಯಮಗಳನ್ನು ತಿಳಿಸಿದರು. ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.