ಕೂಡಿಗೆ, ಜ. ೩೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈಗಾಗಲೇ ಎಲ್ಲಾ ಕಡೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆಗಳು ನಡೆದವು.
ಕೊರೊನಾ ಸೋಂಕು ಕಾಣಿಸಿಕೊಂಡಿರುವವರು ತಮ್ಮ ಮನೆಯಲ್ಲಿ ಆರೋಗ್ಯ ಇಲಾಖೆಯವರು ತಿಳಿಸಿದ ದಿನಗಳವರೆಗೆ ಮನೆಯಲ್ಲಿದ್ದು ಚಿಕಿತ್ಸೆ ಪಡೆಯಬೇಕು ಎಂದರು.
ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿ, ತಪ್ಪಿದರೆ ದಂಡವನ್ನು ವಿಧಿಸುವಂತೆ ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು.
ಆರೋಗ್ಯ ಇಲಾಖೆ, ಅಂಗನವಾಡಿ ಮತ್ತು ಅಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅನೇಕ ತೀರ್ಮಾನ ತೆಗೆದುಕೊಂಡರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ ರಾವ್, ಅನಂತ್, ಶಿವಕುಮಾರ್, ಹೆಚ್.ಎಸ್. ರವಿ, ಜಯಶೀಲಾ, ಅಭಿವೃದ್ಧಿ ಅಧಿಕಾರಿ ಅಯಿಷಾ, ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯರು ಹಾಜರಿದ್ದರು.