ಮಡಿಕೇರಿ, ಜ.೩೦: ಜಿಲ್ಲಾ ಕೋವಿಡ್ ಆಸ್ಪತ್ರೆಯ ಡಯಾಲಿಸಿಸ್ ವಿಭಾಗಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಭೇಟಿ ನೀಡಿ ಪರಿಶೀಲಿಸಿದರು. ಉತ್ತಮ ಗುಣಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಖುದ್ದಾಗಿ ಪರಿಶೀಲಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನ ಬೋಧಕ ಆಸ್ಪತ್ರೆ, ಮಡಿಕೇರಿ ಇಲ್ಲಿ ಡಯಾಲಿಸಿಸ್ ವಿಭಾಗವು ದಿನದ ೨೪x೭ ರ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳ ಆರೋಗ್ಯ ಸ್ಥಿತಿ ಪರಿಗಣಿಸಿ ರೋಗಿಗಳಿಗೆ ಆದ್ಯತೆ ಮೇಲೆ ಗುಣಮಟ್ಟದಲ್ಲಿ ಸಂಪೂರ್ಣ ಉಚಿತವಾಗಿ ಸೌಲಭ್ಯಗಳನ್ನು ಒದಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ಮಾಹಿತಿ ನೀಡಿದರು.