ನಾಪೋಕ್ಲು, ಜ. ೩೦: ನಾಪೋಕ್ಲು-ಕಕ್ಕಬ್ಬೆ ಮುಖ್ಯರಸ್ತೆಯ ಕೊಳಕೇರಿ ಬಳಿ ಸುಮಾರು ಒಂದು ಕಿ.ಮೀ ದೂರದ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ ಹಾಗೂ ಜನರ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ಬಗ್ಗೆ ಹಲವಾರು ಬಾರಿ ಸಂಬAಧಪಟ್ಟವರಿಗೆ ದೂರು ನೀಡಿದರೂ ಯಾವದೇ ಪ್ರಯೋಜನವಾಗಿಲ್ಲ. ಲೋಕೋಪಯೋಗಿ ಇಲಾಖೆ ೧೦ ದಿನಗಳೊಳಗೆ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳದಿದ್ದರೆ, ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಕೆ.ಯು. ಅಶ್ರಫ್ ಎಚ್ಚರಿಸಿದ್ದಾರೆ.