ಮಡಿಕೇರಿ, ಜ. ೩೦: ನರಿಯಂದಡ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಫೆ. ೧ ರಂದು ಪೂರ್ವಾಹ್ನ ೧೧ ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣ ಚೆಯ್ಯಂಡಾಣೆಯಲ್ಲಿ ನಡೆಯಲಿದೆ.
ನೋಡಲ್ ಅಧಿಕಾರಿಗಳಾದ ಆರುಂಧತಿ ಟಿ.ಎಸ್. ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ ಉಪಾಧ್ಯಕ್ಷರು ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ನಡೆಸಲಾಗುವುದು.