ಸೋಮವಾರಪೇಟೆ, ಜ.೩೦: ಶಾಂತಳ್ಳಿ ಹಾಗೂ ಸೋಮವಾರಪೇಟೆ ಹೋಬಳಿ ವ್ಯಾಪ್ತಿಯಲ್ಲಿ ೯೪ಸಿ ಮತ್ತು ೯೪ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಿರುವ ಫಲಾನುಭವಿಗಳಿಗೆ ತಾ. ೩೧ರಂದು (ಇಂದು) ಹಕ್ಕು ಪತ್ರ ವಿತರಿಸಲಾಗುವುದು ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ. ತಾ. ೩೧ರಂದು ಪೂರ್ವಾಹ್ನ ೧೦ ಗಂಟೆಗೆ ಶಾಸಕರ ಕಚೇರಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅಪ್ಪಚ್ಚುರಂಜನ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.