ಮಾಜಿ ಸಂಸದ ಶಿವರಾಮೇಗೌಡರ ಉಚ್ಛಾಟನೆ

ಬೆಂಗಳೂರು, ಜ. ೩೧: ದಿವಂಗತ ಜಿ. ಮಾದೇಗೌಡರ ಬಗ್ಗೆ ಅವ ಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಂಸದ ಎಲ್.ಆರ್. ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ, ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಎಲ್.ಆರ್. ಶಿವರಾಮೇಗೌಡರನ್ನು ಉಚ್ಛಾಟಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರ ಸ್ವಾಮಿ ಆದೇಶ ಹೊರಡಿಸಿದ್ದಾರೆ. ಶಿವರಾಮೇಗೌಡ ಆಡಿಯೋ ವೈರಲ್ ವಿಚಾರ ಸಂಬAಧ ಎಲ್.ಆರ್. ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದರು.

ಪ್ರಧಾನಿ ಭಾಷಣ ನೇರಪ್ರಸಾರದ ವ್ಯವಸ್ಥೆ

ಬೆಂಗಳೂರು, ಜ. ೩೧: ಕೇಂದ್ರ ಬಜೆಟ್ ಸಂಬAಧ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ತಾ. ೨ ರಂದು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಕಿçÃನ್ ಹಾಕಿ ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳು ಉದ್ದೇಶಿಸಿ ಮಾತನಾಡಲಿದ್ದು, ಈ ಭಾಷಣ ಕೇಳಲು ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲಾ ಕೇಂದ್ರದಲ್ಲಿ ೧೫೦ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸÀಕರು, ಸಚಿವರು ಭಾಗವಹಿಸಲಿದ್ದಾರೆ. ಆರ್ಥಿಕ ತಜ್ಞರೂ ಭಾಗವಹಿಸುವರು ಎಂದು ವಿವರಿಸಿದರು. ತಾ. ೫ ರಂದು ರಾಜ್ಯಕ್ಕೆ ಕೇಂದ್ರದ ಸಚಿವರು ಬರಲಿದ್ದು, ಬಜೆಟ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ತಾ. ೫ ರಿಂದ ೧೫ ರವರೆಗೆ ಆರ್ಥಿಕ ತಜ್ಞರು, ಚೇಂಬರ್ ಆಫ್ ಕಾಮರ್ಸ್ನ ಪದಾಧಿಕಾರಿಗಳು, ವಿಷಯ ತಜ್ಞರು ಸೇರಿ ಜಿಲ್ಲಾ ಕೇಂದ್ರ, ಪ್ರಮುಖ ಕೇಂದ್ರಗಳಲ್ಲಿ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗುವುದು ಎಂದು ವಿವರಿಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್

ಬೆಂಗಳೂರು, ಜ. ೩೧: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇದಾದ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡರು ಸಂಧಾನ ನಡೆಸಿ, ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್‌ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ರಕ್ಷಾ ರಾಮಯ್ಯ ಅವರ ಅಧಿಕಾರವಧಿ ಕೊನೆಗೊಂಡು, ಮೊಹಮ್ಮದ್ ನಲಪಾಡ್ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡರು.

ಹಿಜಾಬ್ ಇಲ್ಲದೆ ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು

ಉಡುಪಿ, ಜ. ೩೧: ಉಡುಪಿಯ ಮಹಿಳಾ ಸರಕಾರಿ ಪಿಯು ಕಾಲೇಜಿನ ಆರು ಮುಸ್ಲಿಂ ವಿದ್ಯಾರ್ಥಿನಿಯರು ಕೊನೆಗೂ ಹಿಜಾಬ್ ಇಲ್ಲದೆ ತರಗತಿಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ. ಹಿಜಾಬ್ ನಮ್ಮ ಸಾಂವಿಧಾನಿಕ ಹಕ್ಕು ಅದನ್ನು ಧರಿಸಿಯೇ ತರಗತಿಗೆ ಹಾಜರಾಗುತ್ತೇವೆ ಎಂದು ಈ ಆರು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಪಾಲಕರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಹೀಮ್ ಉಚ್ಚಿಲ್ ಮತ್ತು ಇತರ ಮುಸ್ಲಿಂ ಮುಖಂಡರು ಭಾಗವಹಿಸಿದ್ದರು. ಅವರು ತರಗತಿಯೊಳಗೆ ಹಿಜಾಬ್‌ಗೆ ಅನುಮತಿ ನೀಡದ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ಧಾರದ ಪರವಾಗಿ ಮಾತನಾಡಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಹೀಮ್ ಉಚ್ಚಿಲ್, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಉತ್ತಮ ಪದ್ದತಿಯಾಗಿದೆ. ನಾನೂ ಸಹ ಮುಸ್ಲಿಮನಾಗಿರುವುದರಿಂದ ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವುದು ಇಸ್ಲಾಮಿಕ್ ಮೌಲ್ಯಗಳ ಪ್ರಕಾರ ಸ್ವೀಕಾರಾರ್ಹವಲ್ಲ. ಷರಿಯಾ ಆಧಾರಿತ ಕಾನೂನನ್ನು ಅನುಸರಿಸುವ ದೇಶಗಳು ವಿಭಿನ್ನವಾಗಿವೆ ಮತ್ತು ಭಾರತ ಪ್ರಜಾಪ್ರಭುತ್ವ ರಾಷ್ಟçವಾಗಿ ವಿಭಿನ್ನವಾಗಿದೆ. ಇಲ್ಲಿ ನಾವು ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದಿದ್ದಾರೆ.

ಕಾರ್ಯಕರ್ತರಿAದ ಮಣಿಪುರ ಬಿಜೆಪಿ ಕಚೇರಿ ದರೋಡೆ

ಮಣಿಪುರ, ಜ. ೩೧: ಮಣಿಪುರ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಲೂಟಿ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಕಾಂಗ್ರೆಸ್‌ನಿAದ ವಲಸೆ ಬಂದವರಿಗೆ ಟಿಕೆಟ್ ವಿಚಾರವಾಗಿ ಆದ್ಯತೆ ನೀಡಲಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು ಮಣಿಪುರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ವಿರುದ್ಧ ಘೋಷಣೆ ಕೂಗಿ, ಸಿಎಂ ಎನ್. ಬಿರೇನ್ ಸಿಂಗ್ ಹಾಗೂ ರಾಜ್ಯ ವಿಭಾಗದ ಅಧ್ಯಕ್ಷರಾದ ಶಾರದಾ ದೇವಿ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಗಳನ್ನು, ಧ್ವಜವನ್ನು ದಹಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ನಿAದ ಬಿಜೆಪಿಗೆ ಬಂದವರಿಗೆ ಟಿಕೆಟ್ ನೀಡುವುದಕ್ಕಾಗಿ ಹಲವು ಮೂಲ ಬಿಜೆಪಿಗರಿಗೆ, ಆಕಾಂಕ್ಷಿಗಳಿಗೆ ಟಿಕೆಟ್ ತಪ್ಪಿಸಲಾಗಿದೆ. ಇದರಿಂದ ಅಸಮಾಧಾನಗೊಂಡ ಕೆಲವು ಬಿಜೆಪಿ ನಾಯಕರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಿಳೆಗೆ ನಿಂದಿಸಿದ್ದ ಎ.ಎಸ್.ಐ. ಅಮಾನತ್ತು

ಬೆಂಗಳೂರು, ಜ. ೩೧: ಮಹಿಳೆಗೆ ಒದ್ದು, ಅವಾಚ್ಯ ಪದಗಳಿಂದ ನಿಂದಿಸಿದ್ದ ಆರೋಪದಡಿ ಹಲಸೂರು ಗೇಟ್ ಸಂಚಾರ ಠಾಣೆ ಎ.ಎಸ್.ಐ. ನಾರಾಯಣ ಅವರನ್ನು ಅಮಾನತುಗೊಳಿಸಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಆದೇಶಿಸಿದ್ದಾರೆ. ಜೆ.ಸಿ. ರಸ್ತೆಯಲ್ಲಿ ಟೋಯಿಂಗ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ನಾರಾಯಣ ಅವರು ವಿಶೇಷಚೇತನ ಮಹಿಳೆ ಮಂಜುಳಾ (೩೭) ಎಂಬವರನ್ನು ರಸ್ತೆಯಲ್ಲಿ ಎಳೆದಾಡಿ ಬುಟುಗಾಲಿನಿಂದ ಒದ್ದು, ಅವಾಚ್ಯ ಪದಗಳಿಂದ ನಿಂದಿಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಎಎಸ್‌ಐ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಅವರ ಎಎಸ್‌ಐ ನಾರಾಯಣ ಅವರನ್ನು ಅಮಾನತುಗೊಳಿಸಿ ಘಟನೆ ಸಂಬAಧ ವಿಚಾರಣೆಗೆ ಆದೇಶಿಸಿದ್ದಾರೆ.